ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡಗಾಮ್‌ ಗ್ರೆನೇಡ್‌ ದಾಳಿ: ಲಷ್ಕರ್‌ ಎ ತಯಬಾ ಉಗ್ರ ಬಂಧನ

Last Updated 22 ಆಗಸ್ಟ್ 2022, 19:30 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಡಗಾಮ್‌ ಜಿಲ್ಲೆಯಲ್ಲಿ ಆಗಸ್ಟ್‌ 15ರಂದು ಅಲ್ಪಸಂಖ್ಯಾತರ ನೆಲೆಗಳ ಮೇಲೆ ನಡೆಸಲಾಗಿದ್ದ ಗ್ರೆನೇಡ್‌ ದಾಳಿಯ ಸಂಬಂಧ ಲಷ್ಕರ್‌ ಎ ತಯಬಾದ ಉಗ್ರನೊಬ್ಬನನ್ನು ಭದ್ರತಾ ಪಡೆಯವರು ಸೋಮವಾರ ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಡಿ ಬಂಧನಕ್ಕೊಳಗಾಗಿರುವವರ ಸಂಖ್ಯೆ ಮೂರಕ್ಕೆ ಏರಿದೆ.

‘ಸುಹೇಲ್ ಅಹ್ಮದ್‌ ಮಲಿಕ್‌ ಬಂಧಿತ. ಈತ ಗ್ರೆನೇಡ್‌ ದಾಳಿಯಲ್ಲಿ ಭಾಗಿಯಾಗಿದ್ದ. ಬಂಧನದ ವೇಳೆ ಈತನ ಬಳಿ ಇದ್ದ ಗ್ರೆನೇಡ್‌ ಹಾಗೂ ಇತರ ಸ್ಫೋಟಕಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT