ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಆಗ್ರಹ

Published 24 ಜೂನ್ 2024, 15:17 IST
Last Updated 24 ಜೂನ್ 2024, 15:17 IST
ಅಕ್ಷರ ಗಾತ್ರ

ನವದೆಹಲಿ: ಎಂಟನೆಯ ವೇತನ ಆಯೋಗ ರಚಿಸಬೇಕು, ವೇತನ ಪಡೆಯುವ ವರ್ಗದವರಿಗೆ ಆದಾಯ ತೆರಿಗೆ ವಿನಾಯಿತಿ ಹೆಚ್ಚು ಮಾಡಬೇಕು ಮತ್ತು ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತರಬೇಕು ಎನ್ನುವ ಬೇಡಿಕೆಗಳನ್ನು ಕಾರ್ಮಿಕ ಸಂಘಟನೆಗಳ ಮುಖಂಡರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮುಂದಿರಿಸಿದ್ದಾರೆ.

ನಿರ್ಮಲಾ ಅವರು ಕೇಂದ್ರ ಬಜೆಟ್‌ಗೆ ಪೂರ್ವಭಾವಿಯಾಗಿ ಕಾರ್ಮಿಕ ಸಂಘಟನೆಗಳ ಮುಖಂಡರ ಜೊತೆ ಸೋಮವಾರ ಸಭೆ ನಡೆಸಿದರು. ಕೇಂದ್ರ ಸರ್ಕಾರದ ಮಾಲೀಕತ್ವದ ಉದ್ದಿಮೆಗಳ ಖಾಸಗೀಕರಣವನ್ನು ಸ್ಥಗಿತಗೊಳಿಸಬೇಕು ಎಂದು ಮುಖಂಡರು ಸಚಿವರನ್ನು ಒತ್ತಾಯಿಸಿದರು.

ಕಾರ್ಪೊರೇಟ್ ತೆರಿಗೆ, ಸಂಪತ್ತಿನ ಮೇಲೆ ತೆರಿಗೆ ಹಾಗೂ ಪಿತ್ರಾರ್ಜಿತ ಆಸ್ತಿ ತೆರಿಗೆಯ ಮೂಲಕ ಹಣಕಾಸಿನ ಸಂಪನ್ಮೂಲ ಒಗ್ಗೂಡಿಸಲು ಮುಂದಾಗಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT