ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್ತಿನ ಬಜೆಟ್ ಅಧಿವೇಶನ ಇಂದು ಪುನರಾರಂಭ

Last Updated 13 ಮಾರ್ಚ್ 2022, 21:30 IST
ಅಕ್ಷರ ಗಾತ್ರ

ನವದೆಹಲಿ:ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗವು ಸೋಮವಾರದಿಂದ ಆರಂಭವಾಗಲಿದ್ದು, ನಿರುದ್ಯೋಗ, ಇಪಿಎಫ್‌ ಬಡ್ಡಿದರ ಕಡಿತ, ಉಕ್ರೇನ್‌ನಿಂದ ಭಾರತೀಯರ ತೆರವು ಮೊದಲಾದ ವಿಷಯಗಳ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ.ಬಜೆಟ್‌ಗೆ ಅನುಮೋದನೆ ಪಡೆದ ಬಳಿಕ ಏಪ್ರಿಲ್ 8ರಂದು ಅಧಿವೇಶನ ಮುಕ್ತಾಯವಾಗಲಿದೆ.

ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದ ಬಜೆಟ್‌ಗೆ ಅನುಮೋದನೆ ಪಡೆಯಲು ಸರ್ಕಾರ ಉದ್ದೇಶಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜಮ್ಮು ಕಾಶ್ಮೀರದ ಆಯವ್ಯಯವನ್ನು ಸೋಮವಾರ ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಸಂವಿಧಾನ (ಪರಿಶಿಷ್ಟ ಪಂಗಡಗಳು) ಆದೇಶ (ತಿದ್ದುಪಡಿ) ಮಸೂದೆಯನ್ನು ಮಂಡಿಸಲು ಸರ್ಕಾರ ಉದ್ದೇಶಿಸಿದೆ.

ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ರಷ್ಯಾ–ಉಕ್ರೇನ್ ಯುದ್ಧದಲ್ಲಿ ಭಾರತ ತೆಗೆದುಕೊಂಡ ನಿಲುವಿನ ಬಗ್ಗೆ ಸದನಕ್ಕೆ ಮಾಹಿತಿ ನೀಡುವ ಸಾಧ್ಯತೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT