ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಪಿ ಸರ್ಕಾರ ರಾಮರಾಜ್ಯದ ಆದರ್ಶಗಳಿಂದ ಪ್ರೇರಿತವಾಗಿದೆ: ಅರವಿಂದ ಕೇಜ್ರಿವಾಲ್‌

Published 4 ಮಾರ್ಚ್ 2024, 12:28 IST
Last Updated 4 ಮಾರ್ಚ್ 2024, 12:28 IST
ಅಕ್ಷರ ಗಾತ್ರ

ನವೆದೆಹಲಿ: ದೆಹಲಿ ಸರ್ಕಾರದ 2024–25ನೇ ಸಾಲಿನ ಬಜೆಟ್‌ ಪ್ರತಿಯೊಂದು ಕ್ಷೇತ್ರದ ಮೇಲೂ ಕಾಳಜಿ ವಹಿಸಿದೆ. ಎಎಪಿ ಸರ್ಕಾರ ರಾಮರಾಜ್ಯದ ಆದರ್ಶಗಳಿಂದ ಪ್ರೇರಿತವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ತಿಳಿಸಿದ್ದಾರೆ.

‘ಮುಖ್ಯಮಂತ್ರಿ ಮಹಿಳಾ ಸಮ್ಮಾನ್’ ಯೋಜನೆಯಡಿ 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೂ ಮಾಸಿಕ ₹1 ಸಾವಿರ ನೀಡುವ ಘೋಷಣೆಯು ಬಹುಶಃ ಪ್ರಪಂಚದಲ್ಲಿ ಮಹಿಳಾ ಸಬಲೀಕರಣಕ್ಕೆ ತೆಗೆದುಕೊಂಡಿರುವ ಬಹುದೊಡ್ಡ ಕ್ರಮವಾಗಿದೆ’ ಎಂದು ಅವರು ಹೇಳಿದ್ದಾರೆ.

ದೆಹಲಿ ವಿಧಾನಸಭೆಯಲ್ಲಿ, ರಾಜ್ಯ ಸರ್ಕಾರದ ಹಣಕಾಸು ಸಚಿವೆ ಅತಿಶಿ ಅವರು ತಮ್ಮ 10ನೇ ಬಜೆಟ್‌ ಮಂಡಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್‌, ‘ಇದು ಉತ್ತಮ ಬಜೆಟ್‌ ಆಗಿದ್ದು, ಪ್ರತಿಯೊಂದು ವಿಭಾಗದ ಜನರು ಹಾಗೂ ಕ್ಷೇತ್ರಗಳನ್ನು ಪರಿಗಣಿಸಿದೆ’ ಎಂದು ತಿಳಿಸಿದ್ದಾರೆ.

‘ಮುಖ್ಯಮಂತ್ರಿ ಮಹಿಳಾ ಸಮ್ಮಾನ್’ ಯೋಜನೆಯು ಬಹುಶಃ ಮಹಿಳೆಯರ ಸಬಲೀಕರಣಕ್ಕಾಗಿ ಕೈಗೊಂಡ ವಿಶ್ವದ ಬಹುದೊಡ್ಡ ಕಾರ್ಯಕ್ರಮವಾಗಿದೆ. ಈ ಯೋಜನೆಯು ಭಾರಿ ಮೊತ್ತವನ್ನು ಒಳಗೊಂಡಿದೆ. ಲೋಕಸಭಾ ಚುನಾವಣೆಯ ನಂತರ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ’ ಎಂದು ಅವರು ಹೇಳಿದ್ದಾರೆ.

ಈ ಯೋಜನೆಯಡಿ ದೆಹಲಿಯ 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೂ ಮಾಸಿಕ ₹1 ಸಾವಿರ ನೀಡಲಾಗುತ್ತದೆ.

‘ದೆಹಲಿಯಲ್ಲಿ ಸುಮಾರು 67 ಲಕ್ಷ ಮಹಿಳಾ ಮತದಾರರಿದ್ದಾರೆ. ಈ ಯೋಜನೆಯು ದೆಹಲಿಯ ಸುಮಾರು 45 ರಿಂದ 50 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ. ಆದಾಯ ತೆರಿಗೆ ಪಾವತಿಸುವ ಮಹಿಳೆಯರು ಮತ್ತು ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ಪಡೆಯುತ್ತಿರುವ ಮಹಿಳೆಯರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ’ ಎಂದು ಅವರು ತಿಳಿಸಿದ್ದಾರೆ.

2024–25ನೇ ಸಾಲಿನ ಹಣಕಾಸು ವರ್ಷದಲ್ಲಿ ದೆಹಲಿ ಸರ್ಕಾರವು ₹ 76 ಸಾವಿರ ಕೋಟಿ ಮೊತ್ತದ ಬಜೆಟ್‌ ಮಂಡಿಸಿದೆ. ಕಳೆದ ವರ್ಷ ₹78,800 ಕೋಟಿ ಮೊತ್ತದ ಬಜೆಟ್‌ ಮಂಡಿಸಿತ್ತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT