ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಾರ್ಖಂಡ್‌ನ ದಿಯೊಗಢದಲ್ಲಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

Published 7 ಜುಲೈ 2024, 5:43 IST
Last Updated 7 ಜುಲೈ 2024, 5:43 IST
ಅಕ್ಷರ ಗಾತ್ರ

ದಿಯೊಗಢ: ಉತ್ತರಾಖಂಡದ ದಿಯೊಗಢ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ಎರಡು ಅಂತಸ್ತಿನ ಕಟ್ಟಡವೊಂದು ಕುಸಿದಿದ್ದು, ಅವಶೇಷಗಳಡಿ ಹಲವು ಮಂದಿ ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಿಗ್ಗೆ 6 ಗಂಟೆಗೆ ಘಟನೆ ನಡೆದಿದೆ. ಸ್ಥಳದಿಂದ ನಾಲ್ವರನ್ನು ರಕ್ಷಿಸಲಾಗಿದ್ದು, ಅವಶೇಷಗಳಡಿ ಹಲವು ಮಂದಿ ಸಿಲುಕಿರುವ ಶಂಕೆ ಇದೆ. ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎನ್‌ಡಿಆರ್‌ಎಫ್‌ ಇನ್‌ಸ್ಪೆಕ್ಟರ್‌ ರಂಧೀರ್ ಕುಮಾರ್‌ ಕಾರ್ಯಾಚರಣೆಯ ಮುಂದಾಳತ್ವ ವಹಿಸಿದ್ದಾರೆ.

ಶನಿವಾರ ಗುಜರಾತ್‌ನ ಸೂರತ್‌ನಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದು 7 ಮಂದಿ ಸಾವಿಗೀಡಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT