ಲಖನೌ: ಉತ್ತರ ಪ್ರದೇಶದ ಬುಲಂದ್‍ಶೆಹರ್‌ನಲ್ಲಿ ಡಿಸೆಂಬರ್ 3ರಂದು ಗೋಹಂತಕರ ವಿರುದ್ಧ ನಡೆದ ಪ್ರತಿಭಟನೆ ವೇಳೆ ಗುಂಪನ್ನು ಚದುರಿಸುತ್ತಿದ್ದ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಟ್ಯಾಕ್ಸಿ ಚಾಲಕನನ್ನು ಬಂಧಿಸಲಾಗಿದೆ.

ಪ್ರತಿಭಟನೆ ನಡೆಯುತ್ತಿದ್ದ ವೇಳೆ ಗುಂಪೊಂದು ಪೊಲೀಸರ ಮೇಲೆ ದಾಳಿ ನಡೆಸಿ ಪೊಲೀಸರ ವಾಹನಕ್ಕೆ ಬೆಂಕಿ ಹಚ್ಚಿತ್ತು.ಗಲಭೆ ವೇಳೆ ಗುಂಡು ಹಾರಾಟ ನಡೆದಿದ್ದು, ಸ್ಥಳೀಯ ನಿವಾಸಿ ಸುಮಿತ್ (21 ) ಮತ್ತು ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಹತ್ಯೆಗೀಡಾಗಿದ್ದರು.

ಬಂಧನಕ್ಕೊಳಗಾಗಿರುವ ಪ್ರಶಾಂತ್ ನಾಥ್ ಎಂಬ ಟ್ಯಾಕ್ಸಿ ಚಾಲಕ ತಾನು ಪೊಲೀಸ್ ಅಧಿಕಾರಿ ಮೇಲೆ ಗುಂಡು ಹಾರಿಸಿದ್ದೆ ಎಂದು ಒಪ್ಪಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.

ರಾಜಕೀಯ ಒತ್ತಡದಿಂದ ಪೊಲೀಸರು ಆರೋಪಿಯನ್ನು ಬಂಧಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಸಿಂಗ್ ಅವರ ಕುಟುಂಬ ಆರೋಪಿಸಿತ್ತು.
ಈ ಪ್ರಕರಣದಲ್ಲಿ 27 ಮಂದಿ ಆರೋಪಿಗಳ ಪೈಕಿ 6 ಮಂದಿಯನ್ನು ವಾರಗಳ ಹಿಂದೆಯೇ ಬಂಧಿಸಲಾಗಿತ್ತು.ಗಲಭೆಯ ವಿಡಿಯೊ ದೃಶ್ಯಾವಳಿಗಳನ್ನು ನೋಡಿ 19 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.

ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ಗುರುವಾರ ನೋಯ್ಡಾದಲ್ಲಿ ನಾಥ್‍ನ್ನು ಬಂಧಿಸಿದೆ.

ಇದನ್ನೂ ಓದಿ

ಪೊಲೀಸ್ ಅಧಿಕಾರಿ ಸುಬೋಧ್ ಸಿಂಗ್ ಮೇಲೆ ದಾಳಿ ಪೂರ್ವಯೋಜಿತ ಕೃತ್ಯ?

ಬುಲಂದ್ಶಹರ್ ಹಿಂಸೆ: ಪೊಲೀಸರಿಗೆ ಒಳಸಂಚಿನ ಶಂಕೆ

ಬುಲಂದ್ಶಹರ್ ಹಿಂಸಾಚಾರ: ಪೊಲೀಸ್ ಮೇಲೆ ಗುಂಡು ಹಾರಿಸಿದ ಆರೋಪಿ ಯೋಧನ ಬಂಧನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.