ನವದೆಹಲಿ: ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳ ತನಿಖೆಗೆ ರಚಿಸಲಾಗಿರುವ ತಿಸದಸ್ಯ ಸಮಿತಿಯ ರದ್ದು ಕೋರಿ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ನ್ಯಾ. ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಅರೆ ಸುಟ್ಟ ನೋಟುಗಳ ಕಂತೆಗಳು ಕಳೆದ ವರ್ಷ ಪತ್ತೆಯಾಗಿದ್ದವು. ಪ್ರಕರಣದ ತನಿಖೆಗೆ 'ನ್ಯಾಯಮೂರ್ತಿಗಳ ವಿಚಾರಣಾ ಕಾಯ್ದೆ' ಅಡಿ ಸಮಿತಿ ರಚಿಸುವ ನಿರ್ಧಾರವನ್ನು ಲೋಕಸಭಾ ಸ್ಪೀಕರ್ ಕೈಗೊಂಡಿದ್ದರು. ಅದನ್ನು ರದ್ದು ಮಾಡಬೇಕು ಎಂದು ನ್ಯಾ. ವರ್ಮಾ ಮನವಿ ಮಾಡಿದ್ದರು.

ನ್ಯಾ. ದೀಪಂಕರ್ ದತ್ತಾ ಹಾಗೂ ನ್ಯಾ. ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠವು, ಸಮಿತಿಯ ಕಾರ್ಯ ನಿರ್ವಹಣೆಗೆ ಅನುವು ಮಾಡಿಕೊಟ್ಟಿದೆ.

ನ್ಯಾ. ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಮಾರ್ಚ್ 14ರ ರಾತ್ರಿ ಬೆಂಕಿ ಹೊತ್ತಿಕೊಂಡಿತ್ತು. ಅದನ್ನು ಆರಿಸಲು ಅಗ್ನಿಶಾಮಕ ಸಿಬ್ಬಂದಿ ಧಾವಿಸಿದಾಗ, ನಿವಾಸದಲ್ಲಿ ಭಾರಿ ಪ್ರಮಾಣದಲ್ಲಿ ನಗದು ಪತ್ತೆಯಾಗಿತ್ತು.
.ನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆ ಪ್ರಕರಣ: ರಾಷ್ಟ್ರಪತಿ, ಪ್ರಧಾನಿಗೆ ಸಿಜೆಐ ಪತ್ರ.ನ್ಯಾ. ವರ್ಮಾ ವಿರುದ್ಧದ ಆರೋಪಕ್ಕೆ ಪುಷ್ಟಿ: ಪ್ರತಿಕ್ರಿಯೆ ಕೇಳಿದ ಸಿಜೆಐ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.