ಶಿಮ್ಲಾ: ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಮಂಡಿ ಜಿಲ್ಲೆಯ ಕಾಂಗೊ ಬಳಿ ಶನಿವಾರ ಕಂದಕಕ್ಕೆ ಉರುಳಿ ನಾಲ್ವರು ಗಾಯಗೊಂಡಿದ್ದಾರೆ.
12 ಮಂದಿ ಪ್ರಯಾಣಿಕರಿದ್ದ ಬಸ್ ಮಂಡಿಯಿಂದ ಶಿಮ್ಲಾಕ್ಕೆ ತೆರಳುತ್ತಿತ್ತು. ಕಾಂಗೊ ತಲುಪಿದಾಗ ರಸ್ತೆ ಬದಿಯ ಕಂದಕಕ್ಕೆ ಉರುಳಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಜೂನ್ 24 ರಿಂದ ಇದುವರೆಗೆ 107 ಮಂದಿ ರಸ್ತೆ ಅಪಘಾತಗಳಲ್ಲಿ ಮೃತಪಟ್ಟಿದ್ದಾರೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ಹೇಳಿದೆ.
ಓದಿ... ವಿಡಿಯೊ: ಹಿಮಾಚಲ ಪ್ರದೇಶದಲ್ಲಿ ಮುಂದುವರಿದ ಭಾರಿ ಮಳೆ, ಉಕ್ಕಿ ಹರಿದ ಬಿಯಾಸ್ ನದಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.