ಪಟ್ನಾ: ಬಿಹಾರದ ಉದ್ಯಮಿ ಹಾಗೂ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರನ್ನು ತಮ್ಮ ನಿವಾಸದ ಬಳಿ ಬೈಕ್ನಲ್ಲಿ ಬಂದ ದುಷ್ಕರ್ಮಿ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.

ಈ ಘಟನೆ ಶುಕ್ರವಾರ ರಾತ್ರಿ 11.40ರ ಸುಮಾರಿಗೆ ಇಲ್ಲಿನ ಗಾಂಧಿ ಮೈದಾನ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮಾಹಿತಿ ತಿಳಿದು ಪೊಲೀಸರು ತಕ್ಷಣಕ್ಕೆ ಸ್ಥಳಕ್ಕೆ ತೆರಳಿದರು. ಘಟನಾ ಸ್ಥಳವನ್ನು ಪರಿಶೀಲನೆ ನಡೆಸಿದರು ಹಾಗೂ ವಿಧಿವಿಜ್ಞಾನ ತಜ್ಞರು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಘಟನೆ ಬಗ್ಗೆ ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ಪಟ್ನಾ ಕೇಂದ್ರದ ಎಸ್ಪಿ ದೀಕ್ಷಾ ಸುದ್ದಿಗಾರರಿಗೆ ತಿಳಿಸಿದರು.

ಸ್ಥಳದಿಂದ ಒಂದು ಗುಂಡು ಮತ್ತು ಕಾರ್ಟ್ರಿಡ್ಜ್ ವಶಪಡಿಸಿಕೊಳ್ಳಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ. ಬೈಕ್ನಲ್ಲಿ ಬಂದ ಅಪರಿಚಿತ ದುಷ್ಕರ್ಮಿ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಮೃತ ಗೋಪಾಲ್ ಖೇಮ್ಕಾ ಅವರ ಮಗನನ್ನು 6 ವರ್ಷಗಳ ಹಿಂದೆ ಹಾಜಿಪುರದಲ್ಲಿ ಹತ್ಯೆ ಮಾಡಲಾಗಿತ್ತು ಎಂದು ಅವರ ಕುಟುಂಬದವರು ಹೇಳಿದ್ದಾರೆ.

ರಾಜ್ಯದಲ್ಲಿ ಪ್ರತಿದಿನ ಕೊಲೆ, ಅತ್ಯಾಚಾರ, ಅಪಹರಣ, ಸುಲಿಗೆ ಮತ್ತು ಅಪಹರಣ ಪ್ರಕರಣಗಳು ನಡೆಯುತ್ತಿವೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಆಡಳಿತದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಾಂಗ್ರೆಸ್ ನಾಯಕ ರಾಥೋಡ್ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.