ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತ ರವಿದಾಸ್ ಅವರ 647ನೇ ಜನ್ಮದಿನ ಕಾರ್ಯಕ್ರಮ: ಪ್ರಧಾನಿ ಮೋದಿ ಭಾಗಿ

Published 23 ಫೆಬ್ರುವರಿ 2024, 7:29 IST
Last Updated 23 ಫೆಬ್ರುವರಿ 2024, 7:29 IST
ಅಕ್ಷರ ಗಾತ್ರ

ವಾರಣಾಸಿ (ಉತ್ತರ ಪ್ರದೇಶ): ಸಂತ ರವಿದಾಸ್ ಅವರ ಸಂದೇಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಭಾರತ ಅಭಿವೃದ್ಧಿಯ ಪಥದಲ್ಲಿ ವೇಗವಾಗಿ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು.

ಸಂತ ರವಿದಾಸ್ ಅವರ 647ನೇ ಜನ್ಮದಿನದ ಸ್ಮರಣಾರ್ಥ ವಾರಾಣಸಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಮಾತನಾಡಿದರು.

ಇದೇ ವೇಳೆ ವಿಪಕ್ಷಗಳ ಕೂಟ 'ಇಂಡಿಯಾ' ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ, ಅದರ ಸದಸ್ಯರು ಜಾತಿವಾದದ ಹೆಸರಿನಲ್ಲಿ ಜನರನ್ನು ಶೋಷಣೆ ಮಾಡುತ್ತಿದ್ದಾರೆ. ಅವರು ತಮ್ಮ ಕುಟುಂಬದ ಯೋಗಕ್ಷೇಮದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ. ದಲಿತರು ಮತ್ತು ಬುಡಕಟ್ಟು ಜನಾಂಗದವರ ಕಲ್ಯಾಣದ ಬಗ್ಗೆ ಯೋಚಿಸುವುದಿಲ್ಲ ಎಂದು ದೂರಿದರು

ಇದಕ್ಕೂ ಮೊದಲು ವಾರಾಣಸಿಯಲ್ಲಿ ಹೊಸದಾಗಿ ಸ್ಥಾಪಿಸಲಾದ ಸಂತ ರವಿದಾಸ್ ಪ್ರತಿಮೆಯನ್ನು ಪ್ರಧಾನಿ ಅನಾವರಣಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT