ನವದೆಹಲಿ: ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದುನಡೆದಿದ್ದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.

ಎಲ್ಲ ಏಳು ಕ್ಷೇತ್ರಗಳಲ್ಲಿ ಮತಎಣಿಕೆ ಆರಂಭಗೊಂಡಿದ್ದು, ಯಾವ ಪಕ್ಷ ಗೆಲ್ಲಲಿದೆ ಎಂಬುದು ಕುತೂಹಲ ಕೆರಳಿಸಿವೆ.

ಭಾರಿ ಕುತೂಹಲ ಕೆರಳಿಸಿರುವ ತೆಲಂಗಾಣದ ಮುನುಗೋಡ್ ಕ್ಷೇತ್ರದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ನಾಲ್ಕನೇ ಸುತ್ತಿನ ಮತ ಎಣಿಕೆಅಂತ್ಯಕ್ಕೆ ಕೋಮಟಿರೆಡ್ಡಿ ರಾಜ್ ಗೋಪಾಲ ರೆಡ್ಡಿ 1,100 ಮತಗಳ ಮುನ್ನಡೆ ಗಳಿಸಿದ್ದಾರೆ.

ಹರಿಯಾಣದ ಆದಂಪುರ ಮತ್ತು ಉತ್ತರ ಪ್ರದೇಶದ ಗೋಲ ಗೋಕರ್ಣನಾಥ ಕ್ಷೇತ್ರದಲ್ಲೂ ಬಿಜೆಪಿ ಮುನ್ನಡೆ ಮುನ್ನಡೆಯಲ್ಲಿದೆ.

ಬಿಹಾರದ ಮೊಕಾಮಾ ಕ್ಷೇತ್ರದಲ್ಲಿ ಆರ್ಜೆಡಿಯ ನೀಲಂ ದೇವಿ ಮುನ್ನಡೆಯಲ್ಲಿದ್ದಾರೆ. ಮಹಾರಾಷ್ಟ್ರದ ಅಂಧೇರಿ ಪೂರ್ವದಲ್ಲಿ ಉದ್ಧವ್ ಠಾಕ್ರೆ ಅವರ ಶಿವ ಸೇನಾದ ನಾಯಕ ಋತುಜ ಲಟಕೆ, 4,277 ಮತಗಳಿಂದ ಮುನ್ನಡೆ ಗಳಿಸಿದ್ದಾರೆ.

ಬಿಹಾರದಲ್ಲಿ ಎರಡು ಮತ್ತು ಮಹಾರಾಷ್ಟ್ರ, ಹರಿಯಾಣ, ತೆಲಂಗಾಣ, ಉತ್ತರ ಪ್ರದೇಶ ಮತ್ತು ಒಡಿಶಾ ರಾಜ್ಯಗಳಲ್ಲಿ ತಲಾ ಒಂದು ಸ್ಥಾನಗಳಿಗೆ ಉಪಚುನಾವಣೆ ನಡೆದಿತ್ತು. ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿಗೆ ಪ್ರಾದೇಶಿಕ ಪಕ್ಷಗಳು ಸವಾಲೊಡ್ಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.