ನವದೆಹಲಿ: ದೇಶದ 6 ರಾಜ್ಯಗಳಲ್ಲಿನ 7 ವಿಧಾನಸಭೆ ಸ್ಥಾನಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು ಎಲ್ಲ ಕ್ಷೇತ್ರಗಳಲ್ಲೂ ಮತದಾನ ಬಿರುಸುಗೊಂಡಿದೆ ಎಂದು ಚುನಾವಣಾಧಿಕಾರಿಗಳು ಹೇಳಿದ್ದಾರೆ.

ಉತ್ತರಪ್ರದೇಶದ ಘೋಸಿ, ಪಶ್ಚಿಮ ಬಂಗಾಳದ ಧುಗ್ಪುರಿ, ಕೇರಳದ ಪುತುಪಲ್ಲಿ, ಉತ್ತರಾಖಂಡದ ಬಾಗೇಶ್ವರ್, ಜಾರ್ಖಂಡ್‌ನ ದುಮ್ರಿ, ತ್ರಿಪುರಾದ ಬಾಕ್ಸ್‌ನಗರ್ ಮತ್ತು ದಾಂಪುರ ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ.

ಬೆಳಗ್ಗೆ 7ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ 5 ಗಂಟೆಯವರೆಗೂ ಮತದಾನ ನಡೆಯಲಿದೆ. ಎಲ್ಲ ಕಡೆ ಪೊಲೀಸ್ ಬಿಗಿಭದ್ರತೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಅಲ್ಲಲ್ಲಿ ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿದರೆ ಮತದಾನ ಶಾಂತಿಯುತವಾಗಿ ನಡೆಯುತ್ತಿದ್ದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ,

ಈ ಎಲ್ಲ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಸೆ.8ರಂದು ಪ್ರಕಟವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.