ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

CAA ಜಾರಿ | ಬಿಜೆಪಿಯಿಂದ ನೀಚ ವೋಟ್ ಬ್ಯಾಂಕ್ ರಾಜಕಾರಣ: ಕೇಜ್ರಿವಾಲ್

Published 13 ಮಾರ್ಚ್ 2024, 5:45 IST
Last Updated 13 ಮಾರ್ಚ್ 2024, 5:45 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭೆ ಚುನಾವಣೆಗೆ ಮುಂಚಿತವಾಗಿ 'ಪೌರತ್ವ ತಿದ್ದುಪಡಿ ಕಾಯ್ದೆ' ಜಾರಿ ಮಾಡಿರುವುದು ಬಿಜೆಪಿಯ ನೀಚ ವೋಟ್ ಬ್ಯಾಂಕ್ ರಾಜಕಾರಣವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.

ದೇಶದ ಜನರು ಈ ಕಾನೂನನ್ನು ರದ್ದುಗೊಳಿಸಲು ಬಯಸುತ್ತಾರೆ ಎಂದು ಅವರು ಹೇಳಿದರು.

ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ 3.5 ಕೋಟಿ ಅಲ್ಪಸಂಖ್ಯಾತರಿದ್ದಾರೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಬಡ ವಲಸಿಗರಿಗೆ ಇಲ್ಲಿ ಮನೆ, ಉದ್ಯೋಗ ನೀಡುವ ಮೂಲಕ ನಮ್ಮ ಜನರ ಜನರ ಹಣವನ್ನು ವ್ಯಯಿಸಲು ಬಯಸುತ್ತದೆ ಎಂದು ಅವರು ಆರೋಪಿಸಿದರು.

ನೆರೆಯ ರಾಷ್ಟ್ರಗಳ ಅಲ್ಪಸಂಖ್ಯಾತರು ದೇಶದಲ್ಲಿ ನೆಲೆಸುವುದರ ಮೂಲಕ ಬಿಜೆಪಿಗೆ ಚುನಾವಣೆಯಲ್ಲಿ ಲಾಭವಾಗಲಿದೆ. ಸಿಎಎ ಜಾರಿ ಬಿಜೆಪಿಯ ನೀಚ ವೋಟ್ ಬ್ಯಾಂಕ್ ರಾಜಕಾರಣವಾಗಿದೆ ಎಂದು ಅವರು ಹೇಳಿದರು.

ಈ ಕಾನೂನನ್ನು ಹಿಂಪಡೆಯದಿದ್ದರೆ ಜನರು ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ಕೇಜ್ರಿವಾಲ್ ಮನವಿ ಮಾಡಿದರು.

ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಯವರು 2019ರ ಡಿಸೆಂಬರ್‌ನಲ್ಲಿ ಅಂಕಿತ ಹಾಕಿದ್ದರು. ಆದರೆ ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ನಾಲ್ಕು ವರ್ಷಗಳ ಬಳಿಕ ಸಿಎಎ ಜಾರಿಗೆ ತರಲಾಗಿದೆ ಎಂದು ಆರೋಪಿಸಲಾಗಿದೆ.

ಈ ಕಾಯ್ದೆಯು ಯಾವುದೇ ದಾಖಲೆಗಳು ಇಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ 2014ರ ಡಿಸೆಂಬರ್ 31ಕ್ಕೆ ಮೊದಲು ಭಾರತ ಪ್ರವೇಶಿಸಿದ ಮುಸ್ಲಿಮೇತರರಿಗೆ ಭಾರತದ ಪೌರತ್ವವನ್ನು ನೀಡುತ್ತದೆ. ಈ ಮೂರು ದೇಶಗಳಲ್ಲಿ ದೌರ್ಜನ್ಯಕ್ಕೆ ಗುರಿಯಾಗಿ ಭಾರತಕ್ಕೆ ಬಂದ ಹಿಂದೂ, ಸಿಖ್, ಜೈನ, ಬೌದ್ಧ, ಪಾರ್ಸಿ ಮತ್ತು ಕ್ರೈಸ್ತ ಸಮುದಾಯದವರಿಗೆ ಭಾರತದ ಪೌರತ್ವವನ್ನು ನೀಡಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT