ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಎ: 4 ವಾರಗಳಲ್ಲಿ ಪ್ರತಿಕ್ರಿಯಿಸಲು ಕೇಂದ್ರಕ್ಕೆ ‘ಸುಪ್ರೀಂ’ ಸೂಚನೆ

Last Updated 12 ಸೆಪ್ಟೆಂಬರ್ 2022, 14:12 IST
ಅಕ್ಷರ ಗಾತ್ರ

ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಯ (ಸಿಎಎ) ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌ಸೋಮವಾರ ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರಗಳ ಗಡುವು ನೀಡಿದೆ.

ಬೇರೆ ಬೇರೆ ಆಯಾಮಗಳಲ್ಲಿ ಸಿಎಎ ಅನ್ನು ವಿರೋಧಿಸಿ ಒಟ್ಟು 200 ಅರ್ಜಿಗಳು ಸಲ್ಲಿಕೆಯಾಗಿವೆ. ಎಲ್ಲಾ ಅರ್ಜಿಗಳನ್ನು ಒಂದೇ ನೆಲೆಯಲ್ಲಿ ವಿಚಾರಣೆ ನಡೆಸುವುದು ಕಷ್ಟವಾಗಲಿದೆ. ಆದ್ದರಿಂದ ಈ ಎಲ್ಲಾ ಅರ್ಜಿಗಳನ್ನು ವಿಷಯಾಧಾರಿತವಾಗಿ ಬೇರ್ಪಡಿಸಬೇಕು ಎಂದು ವಿವಿಧ ಅರ್ಜಿದಾರರ ಪರ ವಕೀಲರು ಸುಪ್ರೀಂ ಕೊರ್ಟ್‌ಗೆ ಮನವಿ ಮಾಡಿದರು.

ಇದಕ್ಕೆ ಒಪ್ಪಿದ ಮುಖ್ಯನ್ಯಾಯಮೂರ್ತಿ ಯು.ಯು.ಲಿಲಿತ್‌ ಹಾಗೂ ನ್ಯಾಯಮೂರ್ತಿ ಎಸ್‌.ರವೀಂದ್ರ ಭಟ್‌ ಅವರಿದ್ದ ಪೀಠವು, ಅರ್ಜಿಗಳನ್ನು ವಿಷಯಾಧಾರಿಕವಾಗಿ ಬೇರ್ಪಡಿಸಲು ಕೇಂದ್ರ ಸರ್ಕಾರಕ್ಕೆ ಎರಡು ವಾರಗಳ ಗಡುವು ನೀಡಿತು. ಈ ರೀತಿ ವಿಷಯಾಧಾರಿತವಾಗಿ ಬೇರ್ಪಡಿಸಿದ ಅರ್ಜಿಗಳಿಗೆ ಕೇಂದ್ರವು ಪ್ರತಿಕ್ರಿಯಿಸಬೇಕು ಎಂದು ಹೇಳಿತು.

ಈ ಪ್ರಕರಣವನ್ನು ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಬಹುದು ಎಂದೂ ಸೂಚಿಸಿದ ನ್ಯಾಯಾಲಯವು, ಮುಂದಿನ ವಿಚಾರಣೆಯನ್ನು ಅಕ್ಟೋಬರ್‌ 31ಕ್ಕೆ ನಿಗದಿಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT