ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಎ ನಿಯಮಗಳು ಅಸಂವಿಧಾನಿಕ: ಕೇಂದ್ರದ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

Published 12 ಮಾರ್ಚ್ 2024, 10:28 IST
Last Updated 12 ಮಾರ್ಚ್ 2024, 10:28 IST
ಅಕ್ಷರ ಗಾತ್ರ

ಬರಾಸತ್ (ಪಶ್ಚಿಮ ಬಂಗಾಳ): 'ಸಿಎಎ ಅಧಿಸೂಚನೆಯಲ್ಲಿ ಹೊರಡಿಸಿದ ನಿಯಮಗಳು ಅಸಂವಿಧಾನಿಕ ಮತ್ತು ತಾರತಮ್ಯದಿಂದ ಕೂಡಿವೆ' ಎಂದು ಆರೋಪಿಸುವ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ಉತ್ತರ 24 ಪರಗಣ ಜಿಲ್ಲೆಯ ಹಬ್ರಾದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, 'ಪಶ್ಚಿಮ ಬಂಗಾಳದಲ್ಲಿ ಸಿಎಎ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಕಾನೂನಿನ ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವ ಮೊದಲು ಜನರು ಹಲವು ಬಾರಿ ಯೋಚಿಸಬೇಕು' ಎಂದು ಕರೆ ನೀಡಿದ್ದಾರೆ.

'ಪೌರತ್ವ ತಿದ್ದುಪಡಿ ಕಾಯ್ದೆ –2019ಕ್ಕೆ (ಸಿಎಎ) ಸಂಬಂಧಿಸಿದ ನಿಯಮಗಳನ್ನು ಕೇಂದ್ರವು ಸೋಮವಾರ ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಆದರೆ ಸಿಎಎ ನಿಯಮಗಳಲ್ಲಿ ಯಾವುದೇ ಸ್ಪಷ್ಟತೆ ಇಲ್ಲ ಮತ್ತು ಅವು ಕಾನೂನುಬದ್ಧವಾಗಿವೆಯೇ ಎಂಬ ಅನುಮಾನವಿದೆ' ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT