ಮುಂಬೈ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಪೆಟ್ರೋಲ್ ಬಂಕ್‌ವೊಂದರಲ್ಲಿ ₹5 ಹಣಕ್ಕಾಗಿ ಗಲಾಟೆ ನಡೆದಿದೆ. ಮೂವರು ವ್ಯಕ್ತಿಗಳು ಕ್ಯಾಬ್ ಚಾಲಕನನ್ನು ಥಳಿಸಿದ್ದು, ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಕ್ಯಾಬ್ ಚಾಲಕ ₹300 ನೀಡಿ, ₹295ಕ್ಕೆ ಪ್ರೆಟ್ರೋಲ್ ಹಾಕಿಸಿಕೊಂಡಿದ್ದು, ಉಳಿದ ₹5 ವಾಪಸ್ ನೀಡುವಂತೆ ಅಲ್ಲಿನ ಸಿಬ್ಬಂದಿಯನ್ನು ಕೇಳಿದ್ದಾರೆ. ಈ ವೇಳೆ ಕೋಪಗೊಂಡ ಪ್ರೆಟ್ರೋಲ್ ಬಂಕ್ ಸಿಬ್ಬಂದಿ ಚಾಲಕನ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.