ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬಿನ ಎಫ್‌ಆರ್‌ಪಿ ₹25 ಹೆಚ್ಚಳ

Published 21 ಫೆಬ್ರುವರಿ 2024, 20:06 IST
Last Updated 21 ಫೆಬ್ರುವರಿ 2024, 20:06 IST
ಅಕ್ಷರ ಗಾತ್ರ

ನವದೆಹಲಿ: ಈ ವರ್ಷದ ಅಕ್ಟೋಬರ್‌ನಿಂದ ಆರಂಭವಾಗುವ 2024–25ನೇ ಅವಧಿಗೆ ಕಬ್ಬಿನ ಎಫ್‌ಆರ್‌ಪಿ ದರವನ್ನು ಪ್ರತಿ ಕ್ವಿಂಟಲ್‌ಗೆ ₹25ರಷ್ಟು ಹೆಚ್ಚಳ ಮಾಡಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಘೋಷಿಸಿದೆ. 

ಇದರೊಂದಿಗೆ, ಪ್ರತಿ ಕ್ವಿಂಟಲ್‌ ಕಬ್ಬಿನ ಎಫ್‌ಆರ್‌ಪಿ ದರ ₹340ಕ್ಕೆ ಹೆಚ್ಚಳವಾಗಲಿದೆ.  ಮಹಾರಾಷ್ಟ್ರ, ಉತ್ತರ ಪ್ರದೇಶ ಹಾಗೂ ಕರ್ನಾಟಕದಲ್ಲಿ ಅಧಿಕ ಪ್ರಮಾಣದಲ್ಲಿ ಕಬ್ಬು ಬೆಳೆಯಲಾಗುತ್ತದೆ.

‘ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಮೇಲಿನ ಸಂಪುಟ ಸಮಿತಿ (ಸಿಸಿಇಎ) ಈ ನಿರ್ಧಾರ ಕೈಗೊಳ್ಳಲಾಯಿತು’ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್‌ ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ಬಾಹ್ಯಾಕಾಶದಲ್ಲಿ ಎಫ್‌ಡಿಐ: ಬಾಹ್ಯಾಕಾಶ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆಗೆ(ಎಫ್‌ಡಿಐ) ಸಂಬಂಧಿಸಿದ ನಿಯಮಗಳನ್ನು ಕೇಂದ್ರ ಸರ್ಕಾರ ಮತ್ತಷ್ಟು ಸರಳಗೊಳಿಸಿದೆ. ಉಪ‍ಗ್ರಹಗಳಲ್ಲಿ ಬಳಸುವ ಬಿಡಿಭಾಗಗಳ ಉತ್ಪಾದನೆಯಲ್ಲಿ ಶೇ 100ರಷ್ಟು ಎಫ್‌ಡಿಐಗೆ ಅನುಮತಿ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT