ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಹೆಸರು

Published 5 ಜನವರಿ 2024, 16:07 IST
Last Updated 5 ಜನವರಿ 2024, 16:07 IST
ಅಕ್ಷರ ಗಾತ್ರ

ನವದೆಹಲಿ: ಅಯೋಧ್ಯೆ ವಿಮಾನನಿಲ್ದಾಣವನ್ನು ‘ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನನಿಲ್ದಾಣ, ಅಯೋಧ್ಯಾಧಾಮ್‌’ ಎಂದು ಹೆಸರಿಸುವ ಪ್ರಸ್ತಾವಕ್ಕೆ ಕೇಂದ್ರ ಸಂಪುಟ ಸಭೆ ಶುಕ್ರವಾರ ಅಂಗೀಕಾರ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಈ ವಿಮಾನನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನನಿಲ್ದಾಣವಾಗಿ ಕೂಡ ಘೋಷಿಸಿದೆ. ಮೋದಿ ಅವರು ಡಿ. 30ರಂದು ವಿಮಾನನಿಲ್ದಾಣವನ್ನು ಉದ್ಘಾಟಿಸಿದ್ದರು.

ಅಂತರರಾಷ್ಟ್ರೀಯ ವಿಮಾನನಿಲ್ದಾಣ ಎಂದು ಘೋಷಿಸಿರುವುದರಿಂದ ಈ ಪ್ರದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗಲಿದೆ. ಅಲ್ಲದೆ ಪ್ರವಾಸಿಗರು ಮತ್ತು ವಿದೇಶಿ ಯಾತ್ರಿಗಳು ಬರುವುದರಿಂದ ಅಯೋಧ್ಯೆಯು ಜಾಗತಿಕ ಮಟ್ಟದ ಯಾತ್ರಾ ಸ್ಥಳವಾಗಿಯೂ ರೂಪುಗೊಳ್ಳಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT