ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಜ್ವಲ ಯೋಜನೆ: ₹1,650 ಕೋಟಿ ಬಿಡುಗಡೆಗೆ ಸಂಪುಟ ಅಸ್ತು

Published 14 ಸೆಪ್ಟೆಂಬರ್ 2023, 15:49 IST
Last Updated 14 ಸೆಪ್ಟೆಂಬರ್ 2023, 15:49 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಅಡಿಯಲ್ಲಿ 75 ಲಕ್ಷ ಎಲ್‌ಪಿಜಿ ಸಂಪರ್ಕ ಒದಗಿಸುವ ಸಲುವಾಗಿ ತೈಲ ಮಾರುಕಟ್ಟೆ ಕಂಪನಿಗಳಿಗೆ ₹1,650 ಕೋಟಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

75 ಲಕ್ಷ ಹೆಚ್ಚುವರಿ ಎಲ್‌ಪಿಜಿ ಸಂಪರ್ಕ ನೀಡುವುದರಿಂದ ಪಿಎಂಯುವೈ ಯೋಜನೆಯ ಫಲಾನುಭವಿಗಳ ಸಂಖ್ಯೆ 10.35 ಕೋಟಿಗೆ ತಲುಪಲಿದೆ ಎಂದು ವಿವರಿಸಿದ್ದಾರೆ.

ಬಡತನ ರೇಖೆಗಿಂತ ಕೆಳಗೆ ಇರುವ (ಬಿಪಿಎಲ್‌) ಕುಟುಂಬಗಳ ಮಹಿಳೆಯರಿಗೆ ಎಲ್‌ಪಿಜಿ ಸಂಪರ್ಕ ನೀಡುವ ಪಿಎಂಯುವೈ ಯೋಜನೆಗೆ 2016 ಮೇ ತಿಂಗಳಲ್ಲಿ ಮೋದಿ ಅವರು ಚಾಲನೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT