ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಸರ್ಕಾರದ 5 ವರ್ಷಗಳ ನೀಲ ನಕ್ಷೆ ಸಿದ್ಧಪಡಿಸಲು ಸಚಿವರಿಗೆ ಮೋದಿ ಸೂಚನೆ

Published 17 ಮಾರ್ಚ್ 2024, 13:13 IST
Last Updated 17 ಮಾರ್ಚ್ 2024, 13:13 IST
ಅಕ್ಷರ ಗಾತ್ರ

ನವದೆಹಲಿ: ಹೊಸ ಸರ್ಕಾರದ ಮೊದಲ 100 ದಿನ ಮತ್ತು 5 ವರ್ಷಗಳ ನೀಲ ನಕ್ಷೆ ಸಿದ್ಧಪಡಿಸುವಂತೆ ಕೇಂದ್ರದ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಚಿವರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಪಟ್ಟ ಸಚಿವಾಲಯಗಳ ಕಾರ್ಯದರ್ಶಿಗಳು ಮತ್ತು ಇತರೆ ಅಧಿಕಾರಿಗಳ ಜೊತೆ ಚರ್ಚಿಸಿ ಮೊದಲ 100 ದಿನ ಮತ್ತು 5 ವರ್ಷಗಳ ಅಜೆಂಡಾ ಸಿದ್ಧಪಡಿಸುವಂತೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದ ಬೆನ್ನಲ್ಲೇ ಪ್ರಧಾನಿ ಮೋದಿ ಇಂದು ಸಚಿವ ಸಂಪುಟ ಸಭೆ ನಡೆಸಿದ್ದಾರೆ.

ಮಾರ್ಚ್ 3ರಂದು ನಡೆದಿದ್ದ ಮಂತ್ರಿ ಪರಿಷತ್ತಿನ ಸಭೆಯಲ್ಲಿ ಎಲ್ಲ ಸಚಿವರು ವಿಕಸಿತ ಭಾರತ–2024ಕ್ಕೆ ತಮ್ಮದೇ ಆದ ಚಿಂತನೆಗಳನ್ನು ಹಂಚಿಕೊಂಡಿದ್ದರು. ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ 100 ದಿನಗಳಲ್ಲಿ ಕೈಗೊಳ್ಳಬೇಕಾದ ಕೆಲಸಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ವಿಕಸಿತ ಭಾರತದ ಮಾರ್ಗಸೂಚಿಯು ಎರಡು ವರ್ಷಗಳ ತೀವ್ರ ಸಿದ್ಧತೆಯ ಫಲಿತಾಂಶವಾಗಿರುತ್ತದೆ. ಎಲ್ಲ ಸಚಿವಾಲಯಗಳು, ರಾಜ್ಯ ಸರ್ಕಾರಗಳು, ಶೈಕ್ಷಣಿಕ ಸಂಸ್ಥೆಗಳು, ನಾಗರಿಕ ಸಮಾಜ, ವೈಜ್ಞಾನಿಕ ಸಂಸ್ಥೆಗಳು, ಯುವಕರು ಮತ್ತು ಉದ್ಯಮ ಸಂಸ್ಥೆಗಳೊಂದಿಗೆ ನಡೆಸಿದ ವ್ಯಾಪಕ ಸಮಾಲೋಚನೆಗಳನ್ನು ಒಳಗೊಂಡ ಸಂಪೂರ್ಣ-ಸರ್ಕಾರದ ವಿಧಾನವನ್ನು ಒಳಗೊಂಡಿರುತ್ತದೆ ಎಂದು ಮೂಲಗಳು ಹೇಳಿವೆ.

ಇದಕ್ಕಾಗಿ, ವಿವಿಧ ಹಂತಗಳಲ್ಲಿ 2,700ಕ್ಕೂ ಹೆಚ್ಚು ಸಭೆಗಳು, ಕಾರ್ಯಾಗಾರಗಳು ಮತ್ತು ಸೆಮಿನಾರ್‌ಗಳನ್ನು ನಡೆಸಲಾಗಿದೆ. 20ಲಕ್ಷಕ್ಕೂ ಹೆಚ್ಚು ಯುವಕರ ಸಲಹೆಗಳನ್ನು ಸ್ವೀಕರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT