ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

70 ವರ್ಷದ ಮೇಲಿನ ಹಿರಿಯ ನಾಗರಿಕರಿಗೆ ‘ಆಯುಷ್ಮಾನ್ ಭಾರತ’ ಆರೋಗ್ಯ ವಿಮೆ ವಿಸ್ತರಣೆ

Published : 11 ಸೆಪ್ಟೆಂಬರ್ 2024, 15:52 IST
Last Updated : 11 ಸೆಪ್ಟೆಂಬರ್ 2024, 15:52 IST
ಫಾಲೋ ಮಾಡಿ
Comments

ನವದೆಹಲಿ: ‘ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ’ಯ ಅಡಿಯಲ್ಲಿ ಆರೋಗ್ಯ ವಿಮಾ ಸೌಲಭ್ಯವನ್ನು 70 ವರ್ಷ ಹಾಗೂ ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ತೀರ್ಮಾನಿಸಿದೆ.

ಈ ತೀರ್ಮಾನದಿಂದಾಗಿ ನಾಲ್ಕೂವರೆ ಕೋಟಿ ಕುಟುಂಬಗಳಿಗೆ ಅನುಕೂಲ ಆಗಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಹಿರಿಯ ನಾಗರಿಕರ ಆದಾಯ ಎಷ್ಟೇ ಇದ್ದರೂ ಅವರು ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ.

ಈ ಯೋಜನೆಯ ಅಡಿಯಲ್ಲಿ 4.5 ಕೋಟಿ ಕುಟುಂಬಗಳು ಒಟ್ಟು ಆರು ಕೋಟಿ ಹಿರಿಯ ನಾಗರಿಕರು ₹5 ಲಕ್ಷ ಮೌಲ್ಯದ ಉಚಿತ ಆರೋಗ್ಯ ವಿಮೆಗೆ ಅರ್ಹರಾಗುತ್ತಾರೆ. ಅರ್ಹ ಫಲಾನುಭವಿಗಳಿಗೆ ಯೋಜನೆಯ ಅಡಿಯಲ್ಲಿ ಹೊಸದಾಗಿ ಕಾರ್ಡ್‌ ಒಂದನ್ನು ನೀಡಲಾಗುತ್ತದೆ ಎಂದು ಸರ್ಕಾರ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT