ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

15,000 ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಡ್ರೋನ್: ಕೇಂದ್ರ ಸಂಪುಟ ಅಸ್ತು

Published 29 ನವೆಂಬರ್ 2023, 13:12 IST
Last Updated 29 ನವೆಂಬರ್ 2023, 13:12 IST
ಅಕ್ಷರ ಗಾತ್ರ

ನವದೆಹಲಿ: 15,000 ಮಹಿಳಾ ಸ್ವ ಸಹಾಯ ಗುಂಪುಗಳಿಗೆ(ಎಸ್‌ಎಚ್‌ಜಿ) 2024–25ರ ಹಣಕಾಸು ವರ್ಷದಿಂದ ಎರಡು ವರ್ಷಗಳಲ್ಲಿ ಡ್ರೋನ್‌ಗಳನ್ನು ಒದಗಿಸಲು ₹1,261 ಕೋಟಿ ವಿನಿಯೋಗಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.

ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

' 2024–25 ಹಾಗೂ 2025–26ರ ಹಣಕಾಸು ವರ್ಷದಲ್ಲಿ ಆಯ್ದ 15,000 ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಡ್ರೋನ್‌ಗಳನ್ನು ವಿತರಿಸುವ ಯೋಜನೆ ಇದಾಗಿದೆ. ಸ್ವಸಹಾಯ ಗುಂಪುಗಳು ಈ ಡ್ರೋನ್‌ಗಳನ್ನು ರೈತರಿಗೆ ಕೃಷಿ ಕೆಲಸಕ್ಕೆ ಬಾಡಿಗೆ ನೀಡಿ ಆದಾಯ ಗಳಿಸಬಹುದಾಗಿದೆ’ ಎಂದು ಅವರು ಹೇಳಿದ್ದಾರೆ.

ಈ ಯೋಜನೆಯು ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಸುಸ್ಥಿರ ಉದ್ಯಮಕ್ಕೆ ನೆರವಾಗಲಿದ್ದು, ಜೀವನೋಪಾಯಕ್ಕೆ ಅನುಕೂಲವಾಗಲಿದೆ. ಈ ಮೂಲಕ ವರ್ಷಕ್ಕೆ ಕನಿಷ್ಠ ಪಕ್ಷ ₹1 ಲಕ್ಷ ಆದಾಯ ಗಳಿಸಬಹುದಾಗಿದೆ ಎಂದು ಹೇಳಿದ್ದಾರೆ.

ಆಗಸ್ಟ್ 15ರ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಡ್ರೋನ್ ತಂತ್ರಜ್ಞಾನದೊಂದಿಗೆ ಸ್ವಸಹಾಯ ಗುಂಪುಗಳಿಗೆ ಶಕ್ತಿ ನೀಡುವುದಾಗಿ ಮೋದಿ ಘೋಷಿಸಿದ್ದರು. ಗ್ರಾಮೀಣ ಅಭಿವೃದ್ಧಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಮರ್ಥ್ಯವನ್ನು ಹೆಚ್ಚಿಸುವ ವಿಷಯದ ಪ್ರಸ್ತಾಪದ ಸಂದರ್ಭ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT