ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿನಿಮಾಟೊಗ್ರಾಫ್‌ ಮಸೂದೆಗೆ ಕೇಂದ್ರ ಸಂಪುಟ ಅಸ್ತು

Last Updated 19 ಏಪ್ರಿಲ್ 2023, 16:16 IST
ಅಕ್ಷರ ಗಾತ್ರ

ನವದೆಹಲಿ: ‘ಕೇಂದ್ರ ಸಚಿವ ಸಂಪುಟವು ಸಿನಿಮಾಟೊಗ್ರಾಫ್‌ (ತಿದ್ದುಪಡಿ) ಮಸೂದೆ–2023ಕ್ಕೆ ಬುಧವಾರ ಅನುಮೋದನೆ ನೀಡಿದೆ. ಚಲನಚಿತ್ರಗಳ ಪೈರಸಿ ಹಾಗೂ ಆ ಚಿತ್ರಗಳ ತುಣುಕುಗಳನ್ನು ಅಂತರ್ಜಾಲದಲ್ಲಿ ಪ್ರಸಾರ ಮಾಡುವುದಕ್ಕೆ ಕಡಿವಾಣ ಹಾಕಲು ಅಗತ್ಯವಿರುವ ನಿಬಂಧನೆಗಳನ್ನು ಈ ಮಸೂದೆ ಒಳಗೊಂಡಿದೆ’ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಬುಧವಾರ ಮಾತನಾಡಿದ ಅವರು, ‘ಮುಂಬರುವ ಸಂಸತ್‌ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲಾಗುತ್ತದೆ’ ಎಂದಿದ್ದಾರೆ.

‘ಸಿನಿಮಾಗಳಿಗೆ ‘ಯು’, ‘ಎ’ ಹಾಗೂ ‘ಯುಎ’ ಪ್ರಮಾಣ ಪತ್ರಗಳನ್ನು ನೀಡುವ ಪದ್ಧತಿ ಸದ್ಯ ಚಾಲ್ತಿಯಲ್ಲಿದೆ. ಇದರ ಬದಲು ವಯೋಮಾನದ ಆಧಾರದಲ್ಲಿ ಸಿನಿಮಾಗಳನ್ನು ವರ್ಗೀಕರಿಸುವ ಪದ್ಧತಿಯನ್ನು ಈ ಮಸೂದೆಯಲ್ಲಿ ಸೇರ್ಪಡೆ ಮಾಡಲಾಗಿದೆ. ಸಿನಿಮಾ ಉದ್ಯಮದ ಅಗತ್ಯತೆಗಳಿಗೆ ಅನುಗುಣವಾಗಿ ಈ ಮಸೂದೆ ರೂಪಿಸಲಾಗಿದೆ. ಇದಕ್ಕೂ ಮುನ್ನ ಎಲ್ಲಾ ವರ್ಗದವರ ಅಭಿಪ್ರಾಯಗಳನ್ನೂ ಆಲಿಸಲಾಗಿದೆ’ ಎಂದು ಹೇಳಿದ್ದಾರೆ.

‘ಈ ಮಸೂದೆಯನ್ನು ಎಲ್ಲರೂ ಸ್ವಾಗತಿಸಲಿದ್ದಾರೆ. ಇದು ಯಾವ ಬಗೆಯ ವಿವಾದಕ್ಕೂ ದಾರಿ ಮಾಡಿಕೊಡುವುದಿಲ್ಲ ಎಂಬ ನಂಬಿಕೆ ಇದೆ. ಪೈರಸಿಗೆ ಕಡಿವಾಣ ಹಾಕಬೇಕೆಂಬುದು ಎಲ್ಲರ ಬೇಡಿಕೆಯಾಗಿತ್ತು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT