ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪುದುಚೇರಿ: ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಶಿಫಾರಸಿಗೆ ಕೇಂದ್ರ ಸಚಿವ ಸಂಪುಟ ಸಮ್ಮತಿ

Published : 24 ಫೆಬ್ರುವರಿ 2021, 13:36 IST
ಫಾಲೋ ಮಾಡಿ
Comments

ನವದೆಹಲಿ: ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡಲಾಗದೆ ವಿ. ನಾರಾಯಣಸ್ವಾಮಿ ನೇತೃತ್ವದ ಪುದುಚೇರಿಕಾಂಗ್ರೆಸ್‌ಸರ್ಕಾರಪತನಗೊಂಡಿದೆ.ಇದಾದಕೆಲವೇದಿನಗಳನಂತರಪುದುಚೇರಿಯಲ್ಲಿರಾಷ್ಟ್ರಪತಿ ಆಳ್ವಿಕೆ ಹೇರಿಕೆ ಶಿಫಾರಸಿಗೆ ಕೇಂದ್ರ ಸಚಿವ ಸಂಪುಟ ಸಮ್ಮತಿಸಿದೆಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಆಡಳಿತ ಪಕ್ಷದ ಕೆಲವು ಶಾಸಕರು ಪಕ್ಷವನ್ನು ತೊರೆದಿರುವುದರಿಂದಾಗಿ ಸರ್ಕಾರ ಬಹುಮತ ಕಳೆದುಕೊಂಡಿತು. ಇದರಿಂದ ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸಾಮಿ ರಾಜೀನಾಮೆ ನೀಡಿದರು. ಬಳಿಕ ಯಾರೊಬ್ಬರೂ ಸರ್ಕಾರ ರಚನೆಯ ಹಕ್ಕು ಮಂಡಿಸಿಲ್ಲ. ಕೇಂದ್ರಾಡಳಿತ ಪ್ರದೇಶ ಕಾಯ್ದೆಯ ಸೆಕ್ಷನ್ 51 ರೊಂದಿಗೆ ಆರ್ಟಿಕಲ್ 239 ಅನ್ನು ಉಲ್ಲೇಖಿಸಿ, ಲೆಫ್ಟಿನೆಂಟ್ ಗವರ್ನರ್ ವಿಧಾನಸಭೆ ವಿಸರ್ಜಿಸುವ ಪ್ರಸ್ತಾಪವನ್ನು ಮಾಡಿದ್ದಾರೆ' ಎಂದು ಹೇಳಿದರು.

ಇಂದು, ವಿಧಾನಸಭೆಯ ಅಮಾನತಿಗೆ ಸಂಪುಟ ಅನುಮೋದನೆ ನೀಡಿದೆ, ಈಗ ರಾಷ್ಟ್ರಪತಿಗಳ ಅನುಮೋದನೆಯ ನಂತರ ಪುದುಚೇರಿ ವಿಧಾನಸಭೆಯನ್ನು ವಿಸರ್ಜಿಸಲಾಗುವುದು. ಪುದುಚೇರಿಯ ಆಡಳಿತಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮಾದರಿ ನೀತಿ ಸಂಹಿತೆ ಕೆಲವೇ ದಿನಗಳಲ್ಲಿ ಪ್ರಾರಂಭವಾಗುತ್ತದೆ ಮತ್ತು ನಂತರ ಚುನಾವಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಇದಕ್ಕೂ ಮುನ್ನ ಫೆಬ್ರವರಿ 23 ರಂದು ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಮತ್ತು ಅವರ ಮಂತ್ರಿ ಮಂಡಲದ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಗೀಕರಿಸಿದ್ದಾರೆ. ಪುದುಚೇರಿ ವಿಧಾನಸಭೆಯಲ್ಲಿ ಸೋಮವಾರ ಬಹುಮತ ಸಾಬೀತು ಮಾಡಲಾಗದೆ ವಿ. ನಾರಾಯಣಸ್ವಾಮಿ ನೇತೃತ್ವದ ಪುದುಚೇರಿ ಕಾಂಗ್ರೆಸ್‌ ಸರ್ಕಾರ ಪತನಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT