ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಕತ್ತ ಹೈಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ಮಂಗಳವಾರ ರಾಜೀನಾಮೆ: ಗಂಗೋಪಾಧ್ಯಾಯ

Published 3 ಮಾರ್ಚ್ 2024, 23:30 IST
Last Updated 3 ಮಾರ್ಚ್ 2024, 23:30 IST
ಅಕ್ಷರ ಗಾತ್ರ

ಕೋಲ್ಕತ್ತ: ರಾಜ್ಯದಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದ್ದ ಶಿಕ್ಷಣಕ್ಕೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ತೀರ್ಪು ನೀಡಿದ್ದ ಕಲ್ಕತ್ತ ಹೈಕೋರ್ಟ್‌ ನ್ಯಾಯಮೂರ್ತಿ ಅಭಿಜಿತ್‌ ಗಂಗೋಪಾಧ್ಯಾಯ ಅವರು ಮಂಗಳವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ.

ಈ ಬಗ್ಗೆ ಸ್ವತಃ ಮಾಹಿತಿ ನೀಡಿರುವ ಅವರು, ರಾಜಕೀಯ ಪ್ರವೇಶಿಸುವ ಕುರಿತ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸಿದ್ದಾರೆ. ರಾಜೀನಾಮೆ ಸಲ್ಲಿಸಿದ ದಿನ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಸರ್ಕಾರಿ–ಅನುದಾನಿತ ಶಾಲೆಗಳ ಸಿಬ್ಬಂದಿ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಎನ್ನಲಾದ ಪ್ರಕರಣಗಳ ತನಿಖೆ ನಡೆಸುವಂತೆ ಸಿಬಿಐ ಮತ್ತು ಇ.ಡಿ.ಗೆ ಗಂಗೋಪಾಧ್ಯಾಯ ಅವರು ಹಲವು ನಿರ್ದೇಶನಗಳನ್ನು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT