ನವದೆಹಲಿ: ಭಾರತದ ವಿರುದ್ಧ ಮಾಡಿರುವ ‘ಗಂಭೀರ ಆರೋಪ’ಗಳನ್ನು ಸಾಬೀತುಪಡಿಸುವಂತಹ ಯಾವುದೇ ಸಾಕ್ಷ್ಯಗಳನ್ನು ಕೆನಡಾ ಇದುವರೆಗೂ ಒದಗಿಸಿಲ್ಲ ಎಂದು ಸರ್ಕಾರವು ಶುಕ್ರವಾರ ಲೋಕಸಭೆಗೆ ತಿಳಿಸಿದೆ.

‘ಈ ವಿಷಯಕ್ಕೆ ಸಂಬಂಧಿಸಿದಂತೆ ಕೆನಡಾದ ಸಾರ್ವಜನಿಕ ನಿರೂಪಣೆಯು ಅದರ ಭಾರತ ವಿರೋಧಿ ಪ್ರತ್ಯೇಕತಾವಾದಿ ಕಾರ್ಯಸೂಚಿಯ ಭಾಗ ಎಂಬಂತೆ ಗೋಚರಿಸುತ್ತಿದೆ’ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

‘ಅಮೆರಿಕ ಮತ್ತು ಕೆನಡಾದಲ್ಲಿ ನೆಲೆಸಿರುವ, ಅಲ್ಲಿ ಉದ್ಯೋಗದಲ್ಲಿರುವ ಹಾಗೂ ಶಿಕ್ಷಣ ಪಡೆಯುತ್ತಿರುವ ಭಾರತದ ಪ್ರಜೆಗಳ ಸುರಕ್ಷತೆಯು ಸರ್ಕಾರಕ್ಕೆ ಅತ್ಯಂತ ಮಹತ್ವದ್ದಾಗಿದೆ. ಅಮೆರಿಕ ಮತ್ತು ಕೆನಡಾದಲ್ಲಿ ಭಾರತೀಯ ಪ್ರಜೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಸಮಸ್ಯೆಗಳಿಗೆ ತಕ್ಷಣದಲ್ಲೇ ಪರಿಹಾರ ಕಂಡುಕೊಳ್ಳಲಾಗುವುದು’ ಎಂದಿದ್ದಾರೆ.

ಭಾರತದ ಪ್ರಜೆಗಳು ಮತ್ತು ಅಧಿಕಾರಿಗಳನ್ನು ಒಳಗೊಂಡ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಮೆರಿಕ ಹಾಗೂ ಕೆನಡಾದಲ್ಲಿ ನಡೆದಿರುವ ಬೆಳವಣಿಗೆಗಳನ್ನು ಕೇಂದ್ರ ಸರ್ಕಾರವು ಗಮನಿಸುತ್ತಿದೆಯೇ ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅವರು ಪ್ರಶ್ನಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.