ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನದಲ್ಲಿ ತಾಂತ್ರಿಕ ದೋಷ: ಕೆನಡಾ ಪ್ರಧಾನಿ ಇಂದು ದೆಹಲಿಯಲ್ಲೆ ವಾಸ

Published 10 ಸೆಪ್ಟೆಂಬರ್ 2023, 16:27 IST
Last Updated 10 ಸೆಪ್ಟೆಂಬರ್ 2023, 16:27 IST
ಅಕ್ಷರ ಗಾತ್ರ

ನವದೆಹಲಿ: ಜಿ20 ಶೃಂಗಸಭೆ ಮುಗಿಸಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೊರಡಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಈ ಕಾರಣದಿಂದ ಇಂದು ರಾತ್ರಿ ಟ್ರುಡೊ ದೆಹಲಿಯಲ್ಲಿಯೇ ಉಳಿದುಕೊಳ್ಳಲಿದ್ದಾರೆ.

ರಾತ್ರಿ 8 ಗಂಟೆಗೆ ಹೊರಡಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. 

‘ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಪ್ರಯಾಣಿಸಬೇಕಿದ್ದ CFC001 ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಇದೆ ಎಂದು ಕೆನಡಾದ ಸಶಸ್ತ್ರ ಪಡೆಯಿಂದ ತಿಳಿದುಬಂದಿತು. ವಿಮಾನದಲ್ಲಿನ ದೋಷವನ್ನು ರಾತ್ರಿಯೇ ಸರಿಪಡಿಸಲಾಗುವುದಿಲ್ಲ, ಪರ್ಯಾಯ ವ್ಯವಸ್ಥೆ ಮಾಡುವವರೆಗೆ ನಮ್ಮ ನಿಯೋಗವು ಭಾರತದಲ್ಲಿಯೇ ಇರುತ್ತದೆ’ ಎಂದು ಕೆನಡಾ ಪ್ರಧಾನ ಮಂತ್ರಿ ಕಚೇರಿ ಮಾಹಿತಿ ನೀಡಿದೆ ಎಂದು ಎನ್‌ಡಿಟಿವಿ ವರದಿ ತಿಳಿಸಿದೆ.

ಜಸ್ಟಿನ್ ಟ್ರುಡೊ, ಅವರು ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ದೆಹಲಿಗೆ ಆಗಮಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT