ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ | ಅಭ್ಯರ್ಥಿಯ ಆಯ್ಕೆಯಲ್ಲಿ ಎಚ್ಚರ ವಹಿಸುತ್ತೇವೆ: ಅಜಿತ್‌ಪವಾರ್‌

Published 18 ಫೆಬ್ರುವರಿ 2024, 15:33 IST
Last Updated 18 ಫೆಬ್ರುವರಿ 2024, 15:33 IST
ಅಕ್ಷರ ಗಾತ್ರ

ಠಾಣೆ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದ ಬಾರಮತಿ ಜಿಲ್ಲೆಯ ಸಂಸದೆ ಸುಪ್ರಿಯಾ ಸುಳೆ ವಿರುದ್ಧ  ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಪತ್ನಿ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹದ ಬಗ್ಗೆ ಪ್ರತಿಕ್ರಿಯಿಸಿದ ಅಜಿತ್‌ ಪವಾರ್, ‘ಪಕ್ಷವು ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಲಿದೆ’ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಲವೊಂದು ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿ, ಜಾಗರೂಕತೆಯಿಂದ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ’ ಎಂದರು.

ಬಾರಮತಿಯಲ್ಲಿ ಪವಾರ್‌ ಕುಟುಂಬವು ರಾಜಕೀಯವಾಗಿ ಪ್ರಾಬಲ್ಯವನ್ನು ಹೊಂದಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅಜಿತ್‌ ಪವಾರ್‌ ಮಗಳು ಸಂಸದೆ‌ ಸುಪ್ರಿಯಾ ಸುಳೆ ವಿರುದ್ಧ ಅವರ ಅತ್ತಿಗೆ ಸುನೇತ್ರ ಪವಾರ್‌ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳು ಕೇಳಿಬರುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT