ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬಿನ ದರ ಏರಿಕೆ: ಸರ್ಕಾರದ ರೈತ ಪರ ನಿಲುವು ತೋರಿಸುತ್ತದೆ– ಮೋದಿ

Published 22 ಫೆಬ್ರುವರಿ 2024, 6:06 IST
Last Updated 22 ಫೆಬ್ರುವರಿ 2024, 6:06 IST
ಅಕ್ಷರ ಗಾತ್ರ

ನವದೆಹಲಿ: ರೈತರ ಕಲ್ಯಾಣಕ್ಕಾಗಿ ಅವರ ಭರವಸೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಬದ್ಧವಾಗಿದ್ದು, ಕಬ್ಬಿನ ಎಫ್‌ಆರ್‌ಪಿ ದರವನ್ನು ಹೆಚ್ಚಿಸಿರುವುದು ಅಂತಹ ಪ್ರಯತ್ನಗಳ ಒಂದು ಭಾಗವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

‘ಬುಧವಾರ ನಡೆದ ಆರ್ಥಿಕ ವ್ಯವಹಾರಗಳ ಮೇಲಿನ ಸಂಪುಟ ಸಮಿತಿ(ಸಿಸಿಇಎ) ಸಭೆಯಲ್ಲಿ ಕಬ್ಬಿನ ಎಫ್‌ಆರ್‌ಪಿ ದರವನ್ನು ಪ್ರತಿ ಕ್ವಿಂಟಲ್‌ಗೆ ₹25ರಷ್ಟು ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಯಿತು. ಇದರಿಂದ ಕೋಟ್ಯಂತರ ಕಬ್ಬು ಬೆಳಗಾರರಿಗೆ ಅನುಕೂಲವಾಗಲಿದೆ’ ಎಂದು ಅವರು ‘ಎಕ್ಸ್‌’ನಲ್ಲಿ ಬರೆದುಕೊಂಡಿದ್ದಾರೆ.

ಈ ವರ್ಷದ ಅಕ್ಟೋಬರ್‌ನಿಂದ ಆರಂಭವಾಗುವ 2024–25ನೇ ಅವಧಿಗೆ ಕಬ್ಬಿನ ಎಫ್‌ಆರ್‌ಪಿ ದರವನ್ನು ಪ್ರತಿ ಕ್ವಿಂಟಲ್‌ಗೆ ₹25ರಷ್ಟು ಹೆಚ್ಚಳ ಮಾಡಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಘೋಷಿಸಿದೆ. ಇದರೊಂದಿಗೆ, ಪ್ರತಿ ಕ್ವಿಂಟಲ್‌ ಕಬ್ಬಿನ ಎಫ್‌ಆರ್‌ಪಿ ದರ ₹340ಕ್ಕೆ ಹೆಚ್ಚಳ ವಾಗಲಿದೆ.

ಅಲ್ಲದೇ ಬಾಹ್ಯಾಕಾಶ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆಗೆ(ಎಫ್‌ಡಿಐ) ಸಂಬಂಧಿಸಿದ ನಿಯಮಗಳನ್ನು ಸರಳಗೊಳಿಸಲಾಗಿದ್ದು, ಉಪ‍ಗ್ರಹಗಳಲ್ಲಿ ಬಳಸುವ ಬಿಡಿಭಾಗಗಳ ಉತ್ಪಾದನೆಯಲ್ಲಿ ಶೇ. 100ರಷ್ಟು ಎಫ್‌ಡಿಐಗೆ ಅನುಮತಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT