ನವದೆಹಲಿ: ಕೇವಲ ಅಭಿವೃದ್ಧಿಯಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಬದಲಾಗಿ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿರಬೇಕು ಎಂದು ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.

ಎರಡು ದಿನಗಳ ಕಾರ್ಯಾಗಾರದಲ್ಲಿ ಎನ್ಡಿಎ ಸಂಸದರನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ. ಇದೇ ವೇಳೆ ಸಾಮಾಜಿಕ ಮಾಧ್ಯಮಗಳ ಚಟುವಟಿಕೆ, ಬಳಕೆ ಕುರಿತಂತೆ ಚರ್ಚೆ ನಡೆಸಿದ್ದಾರೆ.

‘ಸಂಸದರು ಸಾಮಾಜಿಕ ಮಾಧ್ಯಮಗಳಲ್ಲಿ ಸದಾ ಸಕ್ರಿಯರಾಗಿರಬೇಕು. ಇನ್ಸ್ಟಾಗ್ರಾಮ್ನಂತಹ ವೇದಿಕೆಗಳನ್ನು ಬಳಸಿಕೊಂಡು ಮತದಾರರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಸಂವಹನ ನಡೆಸಲು ಯುವ ಸಂಸದರಿಗೆ ವಿಶೇಷ ಜವಾಬ್ದಾರಿ ಇದೆ’ ಎಂದು ಮೋದಿ ಹೇಳಿದ್ದಾರೆ.

‘ಕೇವಲ ಅಭಿವೃದ್ಧಿ ಕೆಲಸಗಳಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಬದಲಿಗೆ ಜನರೊಂದಿಗೆ ನೇರ ಸಂಪರ್ಕ ಮತ್ತು ತೊಡಗಿಸಿಕೊಳ್ಳುವಿಕೆಯಿಂದ ಮಾತ್ರ ಚುನಾವಣೆ ಗೆಲ್ಲಲು ಸಾಧ್ಯ’ ಎಂದು ಮೋದಿ ಸಲಹೆ ನೀಡಿದ್ದಾರೆ.

ಜನವರಿಯಿಂದ ಆಗಸ್ಟ್ವರೆಗೆ ಬಿಜೆಪಿ ಸಂಸದರ ಸಾಮಾಜಿಕ ಮಾಧ್ಯಮ ಚಟುವಟಿಕೆಗಳನ್ನು ವಿವರಿಸುವ ಮೂರು ಪುಟಗಳ ವರದಿಯನ್ನು ಸಭೆಯಲ್ಲಿ ಮಂಡಿಸಲಾಯಿತು. ಇದೇ ವೇಳೆ ಪ್ರಧಾನಿಯೂ ಹಾಜರಿದ್ದರು.

ಫೇಸ್ಬುಕ್, ಇನ್ಸ್ಟಾಗ್ರಾಮ್, ಎಕ್ಸ್ ಮತ್ತು ಯೂಟ್ಯೂಬ್ನಂತಹ ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್ಗಳನ್ನು ಗಮನದಲ್ಲಿಟ್ಟುಕೊಂಡು ಮೂರು ವರ್ಗಗಳಾಗಿ ವಿಂಗಡಿಸಲಾಗಿದೆ. ಅದರಂತೆ ಒಂದು ತಿಂಗಳಲ್ಲಿ ಫೇಸ್ಬುಕ್ನಲ್ಲಿ ಯಾವುದೇ ಪೋಸ್ಟ್ಗಳನ್ನು ಮಾಡದ ಸಂಸದರನ್ನು ‘ನಿಷ್ಕ್ರಿಯ’ ಎಂದು ಟ್ಯಾಗ್ ಮಾಡಲಾಗಿದ್ದು, ಕೆಂಪು ಎಂದು ಗುರುತಿಸಲಾಗಿದೆ. ಒಂದು ತಿಂಗಳಲ್ಲಿ 60ಕ್ಕಿಂತ ಕಡಿಮೆ ಪೋಸ್ಟ್ಗಳನ್ನು ಮಾಡಿದವರನ್ನು ‘ಕೇವಲ ಸಕ್ರಿಯ’ ಎಂದು ಟ್ಯಾಗ್ ಮಾಡಲಾಗಿದ್ದು, ಹಳದಿ ಎಂದು ಗುರುತಿಸಲಾಗಿದೆ. 60ಕ್ಕೂ ಹೆಚ್ಚು ಪೋಸ್ಟ್ಗಳನ್ನು ಮಾಡಿದವರನ್ನು ‘ಸಕ್ರಿಯ’ ಎಂದು ಟ್ಯಾಗ್ ಮಾಡಲಾಗಿದ್ದು, ಹಸಿರು ಎಂದು ಗುರುತಿಸಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ನಿರೀಕ್ಷೆಗಿಂತ ಕಡಿಮೆ ಪ್ರಮಾಣದಲ್ಲಿ ಸಕ್ರಿಯರಾಗಿದ್ದ ಸಂಸದರಿಗೆ ತಮ್ಮ ಪೋಸ್ಟ್ಗಳನ್ನು ಹೆಚ್ಚಿಸಿಕೊಳ್ಳುವಂತೆ ಪಕ್ಷದ ಹೈಕಮಾಂಡ್ ಸೂಚನೆ ನೀಡಿದೆ ಎಂದು ವರದಿಯಾಗಿದೆ.

ಕಾರ್ಯಾಗಾರದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಸಂಸದರು ಮತ್ತು ಶಾಸಕರು ಜನರನ್ನು ತಲುಪಲು ಸಾಮಾಜಿಕ ಮಾಧ್ಯಮವನ್ನು ಹೇಗೆ ಬಳಸಬಹುದು ಎಂಬುದರ ಕುರಿತು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.