ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿಯಲ್ಲಿ ಅತ್ಯಧಿಕ ತಾಪಮಾನ; 52.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು

Published 29 ಮೇ 2024, 13:30 IST
Last Updated 29 ಮೇ 2024, 13:30 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಮುಂಗೇಶ್‌ಪುರದಲ್ಲಿ ಬುಧವಾರ 52.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇದು ರಾಷ್ಟ್ರ ರಾಜಧಾನಿಯಲ್ಲಿ ದಾಖಲಾದ ಅತ್ಯಂತ ಗರಿಷ್ಠ ತಾಪಮಾನ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಮಂಗಳವಾರ 49.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿತ್ತು. ಅದು ಸಂಜೆ 4.14ರ ಹೊತ್ತಿಗೆ 52.3 ಡಿಗ್ರಿಗೆ ಏರಿಕೆಯಾಗಿದೆ ಎಂದು ದೆಹಲಿಯ ಈಶಾನ್ಯ ಭಾಗದಲ್ಲಿರುವ ಹವಾಮಾನ ಕೇಂದ್ರವು ಮಾಹಿತಿ ನೀಡಿದೆ. ದೆಹಲಿಯಲ್ಲಿ ಇದುವರೆಗೆ ವರದಿಯಾದ ಗರಿಷ್ಠ ತಾಪಮಾನ ಇದಾಗಿದೆ.

ನಗರದ ಹೊರವಲಯದಲ್ಲಿರುವ ಮುಂಗೇಶ್‌ಪುರವು ರಾಜಸ್ಥಾನ ಕಡೆಯಿಂದ ಬೀಸುವ ಬಿಸಿಗಾಳಿ ಪರಿಣಾಮಕ್ಕೊಳಗಾಗುತ್ತದೆ. ಹೀಗಾಗಿ, ಇಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಹವಾಮಾನ ಪ್ರಾದೇಶಿಕ ಮುಖ್ಯಸ್ಥ ಕುಲದಿಪ್‌ ಶ್ರೀವಾಸ್ತವ ತಿಳಿಸಿದ್ದಾರೆ.

ವಿದ್ಯುತ್ ಗರಿಷ್ಠ ಬಳಕೆ
ತಾಪಮಾನ ಏರಿಕೆಯಿಂದಾಗಿ ದೆಹಲಿಯಲ್ಲಿ ಗರಿಷ್ಠ ಪ್ರಮಾಣದಲ್ಲಿ ವಿದ್ಯುತ್‌ ಬಳಕೆಯಾಗಿದೆ. ಇಂದು ಮಧ್ಯಾಹ್ನ 3.36ರ ಬರೋಬ್ಬರಿ 8,302 ಮೆಗಾವ್ಯಾಟ್‌ ವಿದ್ಯುತ್‌ ಬೇಡಿಕೆ ಸೃಷ್ಟಿಯಾಗಿದೆ ಎಂದು ದೆಹಲಿ ಇಂಧನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ನಗರದಲ್ಲಿ 8,300 ಮೆಗಾವ್ಯಾಟ್‌ ವಿದ್ಯುತ್‌ಗೆ ಬೇಡಿಕೆ ಸೃಷ್ಟಿಯಾಗಿರುವುದು ಇದೇ ಮೊದಲು. ಈ ವರ್ಷದ ಬೇಸಿಕೆಯಲ್ಲಿ 8,300 ಮೆಗಾವ್ಯಾಟ್‌ ವಿದ್ಯುತ್‌ಗೆ ಬೇಡಿಕೆ ಉಂಟಾಗಿದ್ದೇ ಗರಿಷ್ಠವಾಗಿತ್ತು ಎಂದೂ ಹೇಳಿದ್ದಾರೆ.

ಅಲ್ಲಲ್ಲಿ ಮಳೆ
ದೆಹಲಿಯ ಕೆಲವು ಪ್ರದೇಶಗಳಲ್ಲಿ ಇಂದು ಅಲ್ಪ ಪ್ರಮಾಣದಲ್ಲಿ ಮಳೆ ಸುರಿದಿದೆ. ಅತಿ ತಾಪದಿಂದ ಬಳಲಿರುವ ಜನರಿಗೆ ಇದರಿಂದ ತುಸು ಬಿಡುವು ಸಿಕ್ಕಂತಾಗಿದೆ.

ದೆಹಲಿ ಹಾಗೂ ಎನ್‌ಸಿಆರ್‌ ಪ್ರದೇಶದಲ್ಲಿ ರಾತ್ರಿವರೆಗೆ ಸಾಧಾರಣ ಮಳೆ ಹಾಗೂ ಮೋಡ ಕವಿದ ವಾತಾವರಣ ಇರಲಿದೆ ಎಂದು ಐಎಂಡಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT