ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ (ಎನ್ಎಂಸಿ) ಎಂಬಿಬಿಎಸ್ ಸೀಟುಗಳಿಗೆ ಮಿತಿ ಹೇರುವ ಮಾರ್ಗಸೂಚಿ ಜಾರಿಯನ್ನು 2024–25 ಮತ್ತು 2025–26ನೇ ಶೈಕ್ಷಣಿಕ ವರ್ಷಕ್ಕೆ ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮಂಗಳವಾರ ರಾಜ್ಯಸಭೆಗೆ ತಿಳಿಸಿದ್ದಾರೆ.

ದೇಶದಾದ್ಯಂತ ವೈದ್ಯಕೀಯ ಶಿಕ್ಷಣವನ್ನು ನಿಯಂತ್ರಿಸುವ ಮತ್ತು ಮೇಲ್ವಿಚಾರಣೆ ವಹಿಸುವ ಜವಾಬ್ದಾರಿಯನ್ನು ಎನ್ಎಂಸಿ ಹೊಂದಿದೆ. ಪ್ರತಿ 10 ಲಕ್ಷ ಜನಸಂಖ್ಯೆಗೆ 100 ಸೀಟುಗಳ ಅನುಪಾತದಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಸೀಟುಗಳನ್ನು ಮಿತಿಗೊಳಿಸಿ ಎನ್ಎಂಸಿ–2023ರಲ್ಲಿ ಮಾರ್ಗಸೂಚಿ ಹೊರಡಿಸಿತ್ತು.

ಇದಕ್ಕೆ ಕೇರಳ ಸೇರಿದಂತೆ ದಕ್ಷಿಣದ ರಾಜ್ಯಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಮಾರ್ಗಸೂಚಿ ಜಾರಿಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.