ನವದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಪಂಜಾಬ್ ಲೋಕ ಕಾಂಗ್ರೆಸ್ ಮತ್ತು ಸುಖದೇವ್ ದಿಂಡ್ಸಾ ಅವರ ಶಿರೋಮಣಿ ಅಕಾಲಿ ದಳ (ಸಂಯುಕ್ತ) ಪಕ್ಷಗಳ ಜೊತೆ ಸೇರಿ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಬಿಜೆಪಿ ಅಧಿಕೃತವಾಗಿ ಘೋಷಿಸಿದೆ.ಈ ಪಕ್ಷಗಳೆಲ್ಲಾ ಸೇರಿ ಜಂಟಿ ಪ್ರಣಾಳಿಕೆ ಹೊರಡಿಸುವುದಾಗಿ ಕೇಂದ್ರ ಸಚಿವ, ಪಂಜಾಬ್ ವಿಧಾನಸಭೆ ಚುನಾವಣೆಗೆ ಬಿಜೆಪಿ ಉಸ್ತುವಾರಿ ಗಜೇಂದ್ರ ಸಿಂಗ್ ಶೆಖಾವತ್ ಸೋಮವಾರ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಕ್ಯಾ. ಅಮರೀಂದರ್ ಸಿಂಗ್ ಮತ್ತು ದಿಂಡ್ಸಾ ಅವರು ಶಾ ಅವರನಿವಾಸದಲ್ಲಿ ನಡೆದ ಸಭೆಯಲ್ಲಿ ಭೇಟಿ ಮಾಡಿದ್ದರು. ಆ ವೇಳೆ ಮೂರು ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಕುರಿತು ನಿರ್ಧರಿಸಲಾಯಿತು. ಮೂರೂ ಪಕ್ಷಗಳ ಇಬ್ಬರು ನಾಯಕರಿರುವ ಜಂಟಿ ಸಮಿತಿ ರಚಿಸಿ ಸೀಟು ಹಂಚಿಕೆ ಕುರಿತು ನಿರ್ಧರಿಸಲಾಗುವುದು ಎಂದು ಶೆಖಾವತ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.