ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಪಾಲರ ಬೆಂಗಾವಲು ವಾಹನಗಳ ಮಧ್ಯೆ ನುಗ್ಗಿದ ಕಾರು

Published 14 ಫೆಬ್ರುವರಿ 2024, 16:12 IST
Last Updated 14 ಫೆಬ್ರುವರಿ 2024, 16:12 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ): ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ ಬೋಸ್‌ ಅವರ ಬೆಂಗಾವಲು ಪಡೆಯ ವಾಹನಗಳ ನಡುವೆ ಕಾರೊಂದು ನುಗ್ಗಿದ ಘಟನೆ ನವದೆಹಲಿಯಲ್ಲಿ ನಡೆದಿದೆ ಎಂದು ರಾಜಭವನದ ಅಧಿಕಾರಿಗಳು ತಿಳಿಸಿದ್ದಾರೆ.

‘ಆರೋಪಿಯು ವಿಧ್ವಂಸಕ ಕೃತ್ಯ ಎಸಗುವ ಉದ್ದೇಶ ಹೊಂದಿದ್ದ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಕಾರು ಚಾಲಕನನ್ನು ಬಂಧಿ‌ಸಿರುವ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ರಾಜ್ಯಪಾಲರು ಬಿಗಿ ಭದ್ರತೆ ಇರುವ ಸ್ಥಳದಲ್ಲಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯಪಾಲರು ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಗೆ ಭೇಟಿ ನೀಡಿ ಮಹಿಳೆಯೊಬ್ಬರ ಆರೋಪಗಳನ್ನು ಆಲಿಸಿದ ಮರುದಿನವೇ (ಮಂಗಳವಾರ) ಈ ಘಟನೆ ನಡೆದಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT