ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಬಂಗಾಳದ ರಾಜ್ಯಪಾಲರ ನಿವಾಸಕ್ಕೆ ನುಗ್ಗಿದ ಕಾರು, ವಿಧ್ವಂಸಕ ಕೃತ್ಯ ಶಂಕೆ

Published 14 ಫೆಬ್ರುವರಿ 2024, 5:30 IST
Last Updated 14 ಫೆಬ್ರುವರಿ 2024, 5:30 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್‌ ಅವರ ದೆಹಲಿ ನಿವಾಸಕ್ಕೆ ಕಾರೊಂದು ನುಗ್ಗಿದ್ದು, ವಿಧ್ವಂಸಕ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ ಎಂದು ರಾಜಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆ ಸಂಬಂಧ ಕಾರು ಚಾಲಕನನ್ನು ಬಂಧಿಸಿರುವ ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ವಿಧ್ವಂಸಕ ಕೃತ್ಯ ಶಂಕೆ ಹಿನ್ನೆಲೆಯಲ್ಲಿ ಬಿಗಿ ಭದ್ರತೆಯಲ್ಲಿ ರಾಜ್ಯಪಾಲರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಸಂದೇಶ್‌ಖಾಲಿ ಪ್ರದೇಶದಲ್ಲಿ ಟಿಎಂಸಿ ಮುಖಂಡ ಶಹಜಹಾನ್ ಶೇಖ್‌ ಅವರ ಬೆಂಬಲಿಗರು ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಟಿಎಂಸಿ ಮುಖಂಡನ ಬೆಂಬಲಿಗರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಮತ್ತು ಆತನ ಬೆಂಬಲಿಗರು ತಮ್ಮ ಭೂಮಿಯನ್ನು ಕಬಳಿಸಿದ್ದಾರೆ ಹಾಗೂ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದರು ರಾಜ್ಯದ ರಾಜ್ಯಪಾಲ ಸಿ.ವಿ. ಆನಂದ್ ಬೋಸ್‌ ಅವರು ಸೋಮವಾರ ಸ್ಥಳಕ್ಕೆ ಧಾವಿಸಿ, ಪ್ರತಿಭಟನೆನಿರತ ಮಹಿಳೆಯರಿಗೆ ಸಾಂತ್ವನ ಹೇಳಿದ್ದರು. ಬಳಿಕ ರಾಜ್ಯಪಾಲರು ದೆಹಲಿಗೆ ತೆರಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT