ಚೆನ್ನೈ: ಮಂಗಳವಾರ ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ಅಂತರರಾಷ್ಟ್ರೀಯ ಸರಕು ವಿಮಾನದ ಒಂದು ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ, ವಿಮಾನ ಇಲ್ಲಿ ಇಳಿದ ನಂತರ ಬೆಂಕಿಯನ್ನು ನಂದಿಸಲಾಯಿತು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ವಿಮಾನವು ಮಲೇಷ್ಯಾದ ಕ್ವಾಲಾಲಂಪುರದಿಂದ ಬರುತ್ತಿತ್ತು.

ಸರಕು ಸಾಗಣೆ ವಿಮಾನದ ನಾಲ್ಕನೇ ಎಂಜಿನ್ನಲ್ಲಿ ಲ್ಯಾಂಡಿಂಗ್ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪೈಲಟ್ಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಯಾವುದೇ ತುರ್ತು ಲ್ಯಾಂಡಿಂಗ್ ಮಾಡದಿದ್ದರೂ, ಪೈಲಟ್ಗಳು ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ವಿಮಾನವು ನಿಲ್ದಾಣದಲ್ಲಿ ಇಳಿದ ತಕ್ಷಣ ಸಜ್ಜಾಗಿ ನಿಂತಿದ್ದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದರು ಎಂದು ಮೂಲಗಳು ತಿಳಿಸಿವೆ.

ಬೆಂಕಿಯ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.