ಮುಂಬೈ: ಮಹಾರಾಷ್ಟ್ರದ ನಾಗ್ಪುರದಲ್ಲಿ ಮಹಿಳಾ ವೈದ್ಯೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಐಪಿಎಸ್ ಅಧಿಕಾರಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚೆಗೆ ನಾಗ್ಪುರದ ಇಮಾಮ್ವಾಡಾ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಮಹಿಳೆ ಎಂಬಿಬಿಎಸ್ ಕೋರ್ಸ್ ಓದುತ್ತಿದ್ದ ವೇಳೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ಮೂಲಕ ವ್ಯಕ್ತಿಯ ಪರಿಚಯವಾಗಿದೆ. ವ್ಯಕ್ತಿಯು ಆ ಸಂದರ್ಭದಲ್ಲಿ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದನು. ಇಬ್ಬರು ಸ್ನೇಹಿತರಾಗಿದ್ದು, ಆರೋಪಿಯು ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಆಕೆಯ ಜೊತೆ ದೈಹಿಕ ಸಂಬಂಧ ಬೆಳೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವ್ಯಕ್ತಿ ಭಾರತೀಯ ಪೊಲೀಸ್ ಸೇವೆಗೆ (ಐಪಿಎಸ್) ಆಯ್ಕೆಯಾದ ಬಳಿಕ, ಮಹಿಳೆಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಈ ಕುರಿತು ಮಹಿಳೆ ವ್ಯಕ್ತಿಯ ಪೋಷಕರನ್ನು ಸಂಪರ್ಕಿಸಿದ್ದು, ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದರಿಂದ ಅಸಮಾಧನಾಗೊಂಡ ಆಕೆ ಪೊಲೀಸರಿಗೆ ದೂರು ನೀಡಿದ್ದಾಳೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆಕೆಯ ದೂರಿನ ಆಧಾರದ ಮೇಲೆ, ಐಪಿಎಸ್ ಅಧಿಕಾರಿಯ ವಿರುದ್ಧ ಅತ್ಯಾಚಾರ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.