ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಹಲಾಲ್‌ ಪ್ರಮಾಣಿಕೃತ ಉತ್ಪನ್ನಗಳ ನಿಷೇಧ

ವಿವಿಧ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲು
Published 18 ನವೆಂಬರ್ 2023, 15:56 IST
Last Updated 18 ನವೆಂಬರ್ 2023, 15:56 IST
ಅಕ್ಷರ ಗಾತ್ರ

ಲಖನೌ: ಹಲಾಲ್‌ ಪ್ರಮಾಣಿಕೃತ ಉತ್ಪನ್ನಗಳ ಮಾರಾಟಕ್ಕೆ ಉತ್ತರಪ್ರದೇಶ ಸರ್ಕಾರ ಶನಿವಾರ ನಿಷೇಧ ಹೇರಿದೆ.

ಖಾದ್ಯ ಮತ್ತು ಸೌಂದರ್ಯವರ್ಧಕ ವಸ್ತುಗಳ ಮಾರಾಟಕ್ಕಾಗಿ ನಕಲಿ ಹಲಾಲ್‌ ಪ್ರಮಾಣಪತ್ರಗಳನ್ನು ನೀಡುವ ಮೂಲಕ ನಿರ್ದಿಷ್ಟ ಸಮುದಾಯದ ಗ್ರಾಹಕರ ಧಾರ್ಮಿಕ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದಲ್ಲಿ ವಿವಿಧ ಸಂಸ್ಥೆಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಬಳಿಕ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಈ ನಿಷೇಧವು ಔಷಧ ಸೇರಿದಂತೆ ಹಲಾಲ್‌ ಪ್ರಮಾಣಿಕೃತ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ ಮತ್ತು ಮಾರಾಟಕ್ಕೆ ಅನ್ವಯವಾಗಲಿದೆ. ರಫ್ತು ಮಾಡುವ ಉತ್ಪನ್ನಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಲಖನೌನ ಐಶ್‌ಭಾಗ್‌ ನಿವಾಸಿ ಶೈಲೇಂದ್ರ ಕುಮಾರ್‌ ಶರ್ಮಾ ಎಂಬುವವರು ನೀಡಿರುವ ದೂರಿನ ಆಧಾರದಲ್ಲಿ ಚೆನ್ನೈನ ಹಲಾಲ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌, ದೆಹಲಿಯ ಜಮಿಯತ್ ಉಲಮಾ-ಇ-ಹಿಂದ್ ಹಲಾಲ್ ಟ್ರಸ್ಟ್, ಮುಂಬೈನ ಹಲಾಲ್‌ ಕೌನ್ಸಿಲ್‌ ಆಫ್‌ ಇಂಡಿಯಾ, ಮಹಾರಾಷ್ಟ್ರದ ಜಮಿಯತ್‌ ಉಲಮಾ ಸಂಸ್ಥೆಗಳ ವಿರುದ್ಧ ಹಜರತ್‌ಗಂಜ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವಿವರಿಸಿವೆ.

ಈ ಸಂಸ್ಥೆಗಳು  ಹಣಕ್ಕಾಗಿ ವಿವಿಧ ಕಂಪನಿಗಳಿಗೆ ನಕಲಿ ಹಲಾಲ್‌ ಪ್ರಮಾಣ ಪತ್ರಗಳನ್ನು ನೀಡುತ್ತಿವೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದಿವೆ. ಈ ಸಂಸ್ಥೆಗಳಿಗೆ ಇಂತಹ ಪ್ರಮಾಣಪತ್ರ ನೀಡುವ ಯಾವುದೇ ಅಧಿಕಾರವಿಲ್ಲ ಎಂದೂ ಹೇಳಿವೆ.

ಆರೋಪಗಳನ್ನು ಅಲ್ಲಗಳೆದಿರುವ ಜಮಿಯತ್ ಉಲಮಾ-ಇ-ಹಿಂದ್ ಹಲಾಲ್ ಟ್ರಸ್ಟ್, ತಪ್ಪು ಮಾಹಿತಿ ಪ್ರಚಾರ ಮಾಡಿರುವುದರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಹೇಳಿದೆ.

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಧಿಸೂಚನೆಯಂತೆ ನಾವು ಸರ್ಕಾರದ ನಿಯಮಗಳನ್ನು ಪಾಲಿಸಿದ್ದೇವೆ. ಹಲಾಲ್‌ ಉತ್ಪನ್ನಗಳು ಅಗತ್ಯವಿಲ್ಲದ ಗ್ರಾಹಕರಿಗೆ ಅದನ್ನು ನಿರಾಕರಿಸುವ ಸ್ವಾತಂತ್ರ್ಯವಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT