ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ ಚಲಾಯಿಸುವುದನ್ನು ವಿಡಿಯೊ ಮಾಡಿದ ಕಾಂಗ್ರೆಸ್‌ ಕಾರ್ಯಕರ್ತ: ಪ್ರಕರಣ ದಾಖಲು

Published 22 ಏಪ್ರಿಲ್ 2024, 10:39 IST
Last Updated 22 ಏಪ್ರಿಲ್ 2024, 10:39 IST
ಅಕ್ಷರ ಗಾತ್ರ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ್‌ ಜಿಲ್ಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನೊಬ್ಬ ಮತ ಚಲಾವಣೆ ಮಾಡುವಾಗ ಮೊಬೈಲ್‌ನಲ್ಲಿ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ಹೇಳಿದ್ದಾರೆ. 

ಮತದಾನ ಮಾಡುವ ವೇಳೆ ಮತದಾರರು ಮೊಬೈಲ್‌ ಫೋನ್‌ಗಳನ್ನು ಬಳಸುವಂತಿಲ್ಲ. ಹೀಗಿದ್ದೂ ಸೋನಮ್‌ ರಾಜೇಶ್‌ ಶ್ರವಂಕರ್‌ (23) ಎನ್ನುವಾತ ರಾಮ್‌ಟೆಕ್ ಲೋಕಸಭಾ ಕ್ಷೇತ್ರದ ಮೌಡಾ ತಹಸಿಲ್ ಮತಗಟ್ಟೆಯಲ್ಲಿ ಮತಚಲಾಯಿಸುವ ವೇಳೆ ಮೊಬೈಲ್‌ ತೆಗೆದುಕೊಂಡು ಹೋಗಿ ವಿಡಿಯೊ ಮಾಡಿದ್ದಾನೆ ಎಂದು ಮೌಡಾ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶುಕ್ರವಾರ ಸಂಜೆ 5 ಗಂಟೆ ಹೊತ್ತಿಗೆ ಇವಿಎಂ ಯಂತ್ರದ ಬಳಿ ತೆರಳಿ ರಾಜೇಶ್‌ ಮತ ಚಲಾಯಿಸಿದ್ದಾನೆ, ಅದರ ವಿಡಿಯೊ ಮಾಡಿ , ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದನು. ವಿಡಿಯೊ ಎಲ್ಲೆಡೆ ಶೇರ್ ಆದ ಬಳಿಕ ವಿಷಯ ಬೆಳಕಿಗೆ ಬಂದಿದೆ. ಆತನ ವಿರುದ್ಧ ದೂರ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT