ಕಣ್ಣೂರು(ಕೇರಳ): ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ದೇಶದ್ರೋಹಿ’ಎಂದು ಟೀಕಿಸಿದ ವ್ಯಕ್ತಿಯೊಬ್ಬರ ಮೇಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು, ಶನಿವಾರ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರನ್ನು ‘ದೇಶದ್ರೋಹಿ’ಎಂದು ರಾಜನ್ ಸಿ. ಕೊಟ್ಟೂರ್ ಎನ್ನುವ ಖಾತೆಯಿಂದ ಫೇಸ್ಬುಕ್ನಲ್ಲಿ ಮಾರ್ಚ್ 3ರಂದು ಕಾಮೆಂಟ್ ಮಾಡಲಾಗಿತ್ತು. ಬಿಜೆಪಿ ಕಾರ್ಯಕರ್ತರೊಬ್ಬರ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದಿದ್ದಾರೆ.

ಆರೋಪಿಯು ಪ್ರಧಾನಿ ಮೋದಿ ಅವರನ್ನು ಮಾನಹಾನಿ ಮಾಡಿದ್ದಾರೆ ಹಾಗೂ ಅವರ ನಡೆಯು ಗಲಭೆಗೆ ಕಾರಣವಾಗುತ್ತದೆ ಎಂದು ದೂರುದಾರರು ಆರೋಪಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 ಮತ್ತು ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 120ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಯ ಎಲೆಕ್ಟ್ರಾನಿಕ್ ಸಾಧನವನ್ನು ಟ್ರೇಸ್ ಮಾಡಲಾಗಿದೆ. ಹೆಚ್ಚಿನ ತನಿಖೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.