ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರ ಪ್ರದೇಶ | ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ, ಹಲ್ಲೆ

Published : 14 ಸೆಪ್ಟೆಂಬರ್ 2024, 4:26 IST
Last Updated : 14 ಸೆಪ್ಟೆಂಬರ್ 2024, 4:26 IST
ಫಾಲೋ ಮಾಡಿ
Comments

ಬಲ್ಲಿಯಾ: ಶಾಲೆಯಿಂದ ಮನೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಪಕ್ರಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಶಾಲೆಯಿಂದ ಮನೆಗೆ ಹೋಗುತ್ತಿದ್ದ ವೇಳೆ ಆರೋಪಿಗಳು ಬಾಲಕಿಯನ್ನು ಹತ್ತಿರದ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಇದಕ್ಕೆ ಪ್ರತಿರೋಧಯೊಡ್ಡಿದ ಸಂತ್ರಸ್ತೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ತಮ್ಮ ಮಗಳ ಕೈ ಮತ್ತು ಬಾಯಿಯನ್ನು ಕಟ್ಟಿ ಹಾಕಿ ಬಲವಂತವಾಗಿ ಅತ್ಯಾಚಾರ ಎಸಗಲು ಪ್ರಯತ್ನಿಸಿದ್ದಾರೆ‘ ಎಂದು ಸಂತ್ರಸ್ತೆಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಗಾಯಗೊಂಡಿದ್ದ ಬಾಲಕಿಯನ್ನು ಕಾಲುವೆಗೆ ಎಸೆದು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳು ಹಾಗೂ ಪೋಕ್ಸೊ ಪ್ರಕರಣದಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಸಂತ್ರಸ್ತೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗಾಗಿ ಮೂರು ತಂಡಗಳನ್ನು ರಚಿಸಿ, ಶೋಧ ಕಾರ್ಯಾಚರಣೆ ಮುಂದುವರಿಸಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ವೀರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT