ಠಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೃತ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು ಭಾರತೀಯ ನ್ಯಾಯ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 64(1)(ಅತ್ಯಾಚಾರ) ಅಡಿಯಲ್ಲಿ ಶನಿವಾರ (ಫೆ.15) ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದಾಗ್ಯೂ, ಎಫ್ಐಆರ್ನಲ್ಲಿ ಆರೋಪಿಯ ಸಾವಿನ ಸಮಯ ಮತ್ತು ಸಂದರ್ಭಗಳ ಬಗ್ಗೆ ವಿವರ ನೀಡಿಲ್ಲ.

ಆರೋಪಿಯು ಮುಂಬ್ರಾದ ತನ್ನ ನೆರೆಹೊರೆಯ 17 ವರ್ಷದ ಬಾಲಕಿಯೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದ. 2024ರ ಜೂನ್ ಮತ್ತು ಆಗಸ್ಟ್ ನಡುವೆ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಬಳಿಕ ಕುಟುಂಬಸ್ಥರ ವಿರೋಧದ ನಡುವೆಯೂ ಆತ ಬಾಲಕಿಯನ್ನು ವಿವಾಹವಾಗಿದ್ದ. ಫೆ.14ರಂದು ಬಾಲಕಿ ಮಗುವಿಗೆ ಜನ್ಮ ನೀಡಿದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಸ್ಥಳೀಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದೂ ಅವರು ಹೇಳಿದ್ದಾರೆ.
.ಒಡಿಶಾ | ಬುಡಕಟ್ಟು ಸಮುದಾಯದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.