ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ತಮಿಳುನಾಡು: ಒಟ್ಟು ₹ 1,301 ಕೋಟಿ ವಶ

Published 18 ಏಪ್ರಿಲ್ 2024, 14:23 IST
Last Updated 18 ಏಪ್ರಿಲ್ 2024, 14:23 IST
ಅಕ್ಷರ ಗಾತ್ರ

ಚೆನ್ನೈ: ಲೋಕಸಭಾ ಚುನಾವಣೆ ಘೋಷಣೆಯಾದ ದಿನದಿಂದ ಏಪ್ರಿಲ್‌ 17ರವರೆಗೆ ತಮಿಳುನಾಡಿನಲ್ಲಿ ಚುನಾವಣಾ ಅಧಿಕಾರಿಗಳು ನಗದು ಸೇರಿದಂತೆ ಒಟ್ಟು ₹ 1,301.22 ಕೋಟಿ ವಶಪಡಿಸಿಕೊಂಡಿದ್ದಾರೆ.

‘₹ 173.85 ಕೋಟಿ ನಗದು, ₹ 6.67 ಕೋಟಿ ಮೌಲ್ಯದ ಮದ್ಯ, ₹ 1.13 ಕೋಟಿ ಮೌಲ್ಯದ ಮಾದಕವಸ್ತು, ₹ 1,083.77 ಕೋಟಿ ಮೌಲ್ಯದ ಚಿನ್ನ, ಬೆಳ್ಳಿಯ ಆಭರಣಗಳು, ₹ 35.78 ಕೋಟಿ ಮೌಲ್ಯದ ಉಡುಗೊರೆಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ’ ಎಂದು ಮುಖ್ಯ ಚುನಾವಣಾ ಅಧಿಕಾರಿ ಮಾಹಿತಿ ನೀಡಿದ್ದಾರೆ. 

‘ರಾಜ್ಯದ ವಿವಿಧ ಭಾಗಗಳಲ್ಲಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ವೇಳೆ ಈ ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ತಮಿಳುನಾಡಿನ 39 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಲಿದೆ. ಒಟ್ಟು 6.23 ಕೋಟಿ ಮತದಾರರು 950 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT