ನವದೆಹಲಿ: ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ನಿವಾಸದಲ್ಲಿ ನೋಟಿನ ಕಂತೆಗಳು ಪತ್ತೆಯಾದ ಆರೋಪದ ಬಗ್ಗೆ ವಿಚಾರಣೆ ನಡೆಸಿರುವ ಮೂವರು ನ್ಯಾಯಮೂರ್ತಿಗಳ ಸಮಿತಿಯು, ವರದಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರಿಗೆ ಸಲ್ಲಿಸಿದೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜಿ.ಎಸ್. ಸಂಧಾವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಅನು ಶಿವರಾಮನ್ ಅವರು ಈ ಸಮಿತಿಯಲ್ಲಿ ಇದ್ದಾರೆ. ಸಮಿತಿಯು ಮೇ 3ರಂದು ವರದಿಗೆ ಅಂತಿಮ ರೂಪ ನೀಡಿದೆ.

ನ್ಯಾಯಮೂರ್ತಿ ವರ್ಮಾ ಅವರ ದೆಹಲಿ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡ ನಂತರದಲ್ಲಿ, ನೋಟಿನ ಕಂತೆಗಳು ಅರ್ಧ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದವು ಎನ್ನಲಾಗಿದೆ. ಈ ಕುರಿತಾಗಿ ವಿಚಾರಣೆ ನಡೆಸಿರುವ ಸಮಿತಿಯು ತನ್ನ ವರದಿಯನ್ನು ಸಿಜೆಐ ಅವರಿಗೆ ಭಾನುವಾರ ಸಲ್ಲಿಸಿದೆ.

ನೋಟುಗಳು ಅರ್ಧ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಆರೋಪ ಬಗ್ಗೆ ದೆಹಲಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಅವರು ಪ್ರಾಥಮಿಕ ವಿಚಾರಣೆ ನಡೆಸಿದ್ದರು. ನಂತರದಲ್ಲಿ ನ್ಯಾಯಮೂರ್ತಿ ವರ್ಮಾ ಅವರಿಂದ ನ್ಯಾಯಾಂಗದ ಹೊಣೆಗಾರಿಕೆ ಹಿಂಪಡೆಯಲಾಯಿತು. ಅವರನ್ನು ದೆಹಲಿ ಹೈಕೋರ್ಟ್ನಿಂದ ಅಲಹಾಬಾದ್ ಹೈಕೋರ್ಟ್ಗೆ ವರ್ಗಾವಣೆ ಮಾಡಲಾಯಿತು.
.ನ್ಯಾಯಮೂರ್ತಿ ಯಶವಂತ್ ವರ್ಮಾ ಪ್ರಕರಣ: ವಿಚಾರಣೆ ಆರಂಭಿಸಿದ ಸಮಿತಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.