ಜಾತಿಗಣತಿಯ ಈ ಮಹತ್ವದ ಹೆಜ್ಜೆಯಿಂದ ಭಾರತವು ಅಧಿಕೃತ, ವೈಜ್ಞಾನಿಕ ಮತ್ತು ಪಾರದರ್ಶಕವಾದ ಜಾತಿ ದತ್ತಾಂಶ ಹೊಂದಲಿದೆ. ಕೇವಲ ರಾಜಕೀಯ ಪ್ರೇರಿತ ರಾಜ್ಯ ಮಟ್ಟದ ಸಮೀಕ್ಷೆಗಳು ವಿಶ್ವಾಸಾರ್ಹತೆ, ಏಕರೂಪತೆ ಹೊಂದಿರುವುದಿಲ್ಲ
ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ
ಜನಗಣತಿಯೊಂದಿಗೆ ಜಾತಿ ಗಣತಿ ನಡೆಸಬೇಕು ಎಂಬುದು ಕಾಂಗ್ರೆಸ್‌ನ ಬಹುದಿನದ ಬೇಡಿಕೆ ಆಗಿತ್ತು. ಸಾಮಾಜಿಕ ನ್ಯಾಯದಡಿ ಗಣತಿ ನಡೆಸಬೇಕು ಎಂದು ಪಕ್ಷ ಒತ್ತಾಯಿಸುತ್ತಲೇ ಬಂದಿದೆ. ಅಹಮದಾಬಾದ್‌ನಲ್ಲಿ ನಡೆದ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲೂ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿತ್ತು
ಜೈರಾಮ್ ರಮೇಶ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
ಸಂಪೂರ್ಣ ಪಾರದರ್ಶಕತೆಯೊಂದಿಗೆ ಜಾತಿ ಜನಗಣತಿ ಪ್ರಾರಂಭಿಸಲು ಕೇಂದ್ರ ಸರ್ಕಾರವು ಹಣ ಮಂಜೂರು ಮಾಡಬೇಕು. ಜಾತಿ ಜನಗಣತಿ ಬಹು ಅಗತ್ಯ. ಸಾಮಾಜಿಕ ನ್ಯಾಯದ ಈ ನೀತಿಯ ಅನುಷ್ಠಾನವನ್ನು ಪ್ರಧಾನಿ ತಪ್ಪಿಸುತ್ತಿದ್ದಾರೆ