ನವದೆಹಲಿ: ಜಾತಿ ಗಣತಿಯಲ್ಲಿ ತೆಲಂಗಾಣದ ಮಾದರಿಯನ್ನು ಅಳವಡಿಸಿಕೊಳ್ಳಿ, ಮೀಸಲಾತಿ ಮೇಲಿನ ಶೇ 50 ರಷ್ಟು ಮಿತಿಯನ್ನು ತೆಗೆದುಹಾಕಿ, ಆರ್ಟಿಕಲ್ 15(5) ತಕ್ಷಣ ಜಾರಿಗೆ ತಂದು ಎಸ್ಸಿ, ಎಸ್ಟಿ, ಮತ್ತು ಒಬಿಸಿ ಸಮುದಾಯಗಳಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ನೀಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಅವರಿಗೆ ಸಲಹೆ ನೀಡಿದ್ದಾರೆ.

ಈ ಕುರಿತು ಮೋದಿ ಅವರಿಗೆ ಪತ್ರ ಬರೆದಿರುವ ಖರ್ಗೆ, ಜಾತಿ ಗಣತಿ ವಿಚಾರವಾಗಿ ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಸಂಭಾಷಣೆ ನಡೆಸಿ ಎಂದು ಹೇಳಿದ್ದಾರೆ.

‘ನಮ್ಮ ಸಮಾಜದಲ್ಲಿ ಹಿಂದುಳಿದವರು, ತುಳಿತಕ್ಕೊಳಗಾದವರು ಮತ್ತು ಅಳಿವಿನ ಅಂಚಿನಲ್ಲಿರುವ ವರ್ಗಗಳಿಗೆ ಅವರ ಹಕ್ಕುಗಳನ್ನು ನೀಡುವ ಜಾತಿ ಜನಗಣತಿಯಂತಹ ಪ್ರಕ್ರಿಯೆಯನ್ನು ನಡೆಸುವುದನ್ನು ಯಾವುದೇ ರೀತಿಯಲ್ಲಿ ವಿಭಜನೆ ಎಂದು ಪರಿಗಣಿಸಲಾಗುವುದಿಲ್ಲ, ಪರಿಗಣಿಸಲೂ ಬಾರದು’ ಎಂದಿದ್ದಾರೆ.

‘ನಮ್ಮ ದೇಶದ ಜನರು ವಿಶಾಲ ಹೃದಯದವರು, ಅಗತ್ಯವಿದ್ದಾಗ ಎಲ್ಲರೂ ಒಗ್ಗಟ್ಟಾಗುತ್ತಾರೆ, ಅದಕ್ಕೆ ಪಹಲ್ಗಾಮ್ ಘಟನೆಯನ್ನು ವಿರೋಧಿಸಿ ಒಂದಾಗಿರುವುದೇ ಸಾಕ್ಷಿ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಖರ್ಗೆ ಅವರು ಪ್ರಧಾನಿ ಮೋದಿಗೆ ಬರೆದ ಪತ್ರವನ್ನು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ ಖರ್ಗೆ ಅವರು ಮೂರು ನಿರ್ದಿಷ್ಟ ಸಲಹೆಗಳನ್ನು ನೀಡಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.