ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ ಜಾತಿ ಸಮೀಕ್ಷೆ | ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

Published 18 ಮೇ 2023, 13:38 IST
Last Updated 18 ಮೇ 2023, 13:38 IST
ಅಕ್ಷರ ಗಾತ್ರ

ನವದೆಹಲಿ: ಬಿಹಾರ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯನ್ನು ಸ್ಥಗಿತಗೊಳಿಸಿ ಎಂದ ಪಟ್ನಾ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಲು ಗುರುವಾರ ನಿರಾಕರಿಸಿದೆ.

‘ಸಮೀಕ್ಷೆಯ ಹೆಸರಿನಲ್ಲಿ ಗಣತಿ ನಡೆಯುತ್ತಿದೆಯೇ ಇಲ್ಲವೇ ಎನ್ನುವುದನ್ನು ಪರೀಕ್ಷಿಸಬೇಕಿದೆ. ಆದ್ದರಿಂದ ಹೈಕೋರ್ಟ್‌ ನೀಡಿರುವ ಆದೇಶಕ್ಕೆ ಮಧ್ಯಂತರ ತಡೆ ನೀಡುವುದಿಲ್ಲ’ ಎಂದು ನ್ಯಾಯಮೂರ್ತಿಗಳಾದ ಅಭಯ್‌ ಎಸ್‌. ಓಕಾ ಹಾಗೂ ರಾಜೇಶ್‌ ಬಿಂದಾಲ್‌ ಅವರಿದ್ದ ಪೀಠವು ಹೇಳಿದೆ.

ಬಿಹಾರ ಸರ್ಕಾರದ ಕಾರ್ಯಕ್ಕೆ ಪಟ್ನಾ ಹೈಕೋರ್ಟ್‌ ಮೇ 4ರಂದು ತಡೆ ನೀಡಿತ್ತು. ಈ ವೇಳೆ ಬಿಹಾರ ಸರ್ಕಾರವು, ‘ತಡೆ ನೀಡಿರುವುದು ಇಡೀ ಪ್ರಕ್ರಿಯೆ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ’ ಎಂದು ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT