ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ಅಭಯಾ ಕೊಲೆ ಪ್ರಕರಣ: ಕ್ಯಾಥೊಲಿಕ್ ಧರ್ಮಗುರು, ಸಿಸ್ಟರ್‌ಗೆ ಜೀವಾವಧಿ ಶಿಕ್ಷೆ

Last Updated 23 ಡಿಸೆಂಬರ್ 2020, 9:02 IST
ಅಕ್ಷರ ಗಾತ್ರ

ತಿರುವನಂತಪುರ: 28 ವರ್ಷಗಳ ಹಿಂದೆ ನಡೆದಿದ್ದ ಕ್ರೈಸ್ತ ಸನ್ಯಾಸಿನಿ ಅಭಯಾ (21) ಕೊಲೆ ಪ್ರಕರಣದಲ್ಲಿ ಕ್ಯಾಥೋಲಿಕ್ ಧರ್ಮಗುರು ಥಾಮಸ್‌ ಎಂ.ಕೊಟ್ಟೂರ್, ಸಿಸ್ಟರ್‌ ಸೆಫಿ ತಪ್ಪಿತಸ್ಥರು ಎಂದು ಸಾಬೀತಾದ ಹಿನ್ನೆಲೆಯಲ್ಲಿ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಇಬ್ಬರಿಗೂ ಜೀವಾವಧಿ ಶಿಕ್ಷೆ ವಿಧಿಸಿದೆ.

ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ ಸನಾಲ್ ಕುಮಾರ್ ಅವರು, ಇಬ್ಬರೂ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಜತೆಗೆ ತಲಾ ₹5 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

1992 ರಲ್ಲಿ ಕೊಟ್ಟಾಯಂನ ಸೇಂಟ್ ಪಿಯಸ್ ಕಾನ್ವೆಂಟ್‌ನ ಬಾವಿಯಲ್ಲಿ ಸಿಸ್ಟರ್ ಅಭಯಾ ಶವ ಪತ್ತೆಯಾಗಿತ್ತು. ಕೊಲೆ ಪ್ರಕರಣದಲ್ಲಿ ಇಬ್ಬರು ತಪ್ಪಿತಸ್ಥರೆಂದು ನ್ಯಾಯಾಲಯ ಮಂಗಳವಾರ ತೀರ್ಪು ನೀಡಿತ್ತು.

ಈ ಪ್ರಕರಣದಲ್ಲಿ ಸಾಕ್ಷ್ಯ ನಾಶ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಬ್ಬರಿಗೂ ಈಗಾಗಲೇ ಏಳು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈಗ ಈ ಎರಡೂ ಶಿಕ್ಷೆಗಳು ಏಕಕಾಲಕ್ಕೆ ಅನ್ವಯವಾಗಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT