ಕೋಲ್ಕತ್ತ: ಜಾನುವಾರು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಸಿ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಮುಖಂಡ ಅನುಬ್ರತಾ ಮೊಂಡಲ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಫೆಬ್ರುವರಿ 3ರವರೆಗೆ ವಿಸ್ತರಿಸಲಾಗಿದೆ.

ಅಸನ್ಸೋಲ್ನ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ಚಕ್ರವರ್ತಿ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.

ಗುರುವಾರ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಮುನ್ನ ಮೊಂಡಲ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದರು.

ಮೊಂಡಲ್ ಅವರು ಜಿಲ್ಲಾ ಸಹಕಾರಿ ಬ್ಯಾಂಕ್ನಲ್ಲಿ ಹಲವಾರು ನಕಲಿ ಬ್ಯಾಂಕ್ ಖಾತೆಗಳನ್ನು ಸೃಷ್ಟಿಸಿದ್ದಾರೆ. ನಕಲಿ ಖಾತೆ ತೆರೆಯಲು ಆರ್ಥಿಕವಾಗಿ ಹಿಂದುಳಿದ ವರ್ಗದ ಜನರ ಗುರುತಿನ ದಾಖಲೆಗಳನ್ನು ಬಳಸಿದ್ದಾರೆ. ಇದರಿಂದ ಜಾನುವಾರು ಹಗರಣದ ಆದಾಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಅಕ್ರಮ ಮಾರ್ಗ ಕಂಡುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ ಮೊಂಡಲ್ ಪರ ವಕೀಲರು ಕಲ್ಕತ್ತಾ ಹೈಕೋರ್ಟ್ನಲ್ಲಿ ಪ್ರತ್ಯೇಕ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಇದನ್ನು ಓದಿ: 35 ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ಹಾರಿದ ಮತ್ತೊಂದು ವಿಮಾನ!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.