ಬಂಧಿತರನ್ನು ಸೂಪರಿಂಟೆಂಡೆಂಟ್ ಸಚಿನ್ ಗೋಕುಲ್ಕಾ, ಚಾರ್ಟರ್ಡ್ ಅಕೌಂಟೆಂಟ್ ರಾಜ್ ಅಗರ್ವಾಲ್ ಮತ್ತು ಅಭಿಷೇಕ್ ಮೆಹ್ತಾ ಎಂದು ಗುರುತಿಸಲಾಗಿದೆ.
ಉದ್ಯಮಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳು ಮೊದಲಿಗೆ ದೂರುದಾರರ ಬಳಿ ₹80 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ನಂತರ ₹60 ಲಕ್ಷಕ್ಕೆ ಒಪ್ಪಿಕೊಂಡಿದ್ದರು ಎಂದು ತಿಳಿದುಬಂದಿದೆ.